CrimeNEWSನಮ್ಮಜಿಲ್ಲೆ

ಹಾಸನ: ಕಾಣೆಯಾಗಿದ್ದ ಮಹಿಳಾ ಕಾನ್ಸ್‌ಟೇಬಲ್‌ ಶವವಾಗಿ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕಾಣೆಯಾಗಿದ್ದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌  ಶವವಾಗಿ ಪತ್ತೆಯಾಗಿರುವುದು ಹಾಸನ ಜಿಲ್ಲೆಯಲ್ಲಿ ವರದಿಯಾಗಿದೆ.

ಮಹಿಳಾ ಪೊಲೀಸ್  ಕಾನ್ಸ್‌ಟೇಬಲ್‌ ಜಿಲ್ಲೆಯ ಅರಸೀಕೆರೆ ತಾಲೂಕಿನ ಸುಧಾ (39)  ಮೃತರು. ಅರಸೀಕೆರೆ-ತಿಪಟೂರು ರಾಷ್ಟ್ರೀಯ ಹೆದ್ದಾರಿ 206 ರ ಮೈಲನಹಳ್ಳಿ ಗ್ರಾಮದ ಬಳಿ ಪೊದೆಯೊಂದರಲ್ಲಿ ಸುಧಾ ಶವವಾಗಿ ಪತ್ತೆಯಾಗಿದ್ದಾರೆ.

ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸುಧಾ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚೆಗಷ್ಟೇ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು.

ಇದೀಗ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸುಧಾ ಅವರನ್ನು ಕಾರಿನಲ್ಲಿ ಕರೆದುಕೊಂಡು ಬಂದು ಅವರ ಚಿಕ್ಕಪ್ಪನ ಮಗ ಮಂಜುನಾಥ್ ಎಂಬಾತ  ಹತ್ಯೆಗೈದಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಇನ್ನು ಸುಧಾ ಅವರನ್ನು ಕೊಲೆ ಮಾಡಿ, ಶುಕ್ರವಾರ ಸಂಜೆ ಶಿವಮೊಗ್ಗದ ಲಾಡ್ಜ್‌ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುನಾಥ್ ಕೂಡ ನೇಣಿಗೆ ಶರಣಾಗಿದ್ದಾನೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಹಾಗೂ ತುಮಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಅರಸೀಕೆರೆ ತಾಲೂಕಿನ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...