NEWSದೇಶ-ವಿದೇಶನಮ್ಮಜಿಲ್ಲೆ

ಹಾಸನ: ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು- ಶ್ರೇಯಸ್ ಪಟೇಲ್‌ಗೆ ಜಯ

ವಿಜಯಪಥ ಸಮಗ್ರ ಸುದ್ದಿ

 ಹಾಸನ:  ಅತ್ಯಾಚಾರ, ಲೈಂಗಿಕ ದೌರ್ಜನ್ಯ  ಆರೋಪಿ  ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲಾಗಿದೆ. ಹಾಸನ ಮತದಾರರು ಕಾಂಗ್ರೆಸ್ ಅಭ್ಯರ್ಥಿಯ ಕೈ ಹಿಡಿದಿದ್ದು, 20 ವರ್ಷದ ಬಳಿಕ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಬೀಗಿದೆ.

ಹಾಸನದ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರು. ಆಮೇಲೆ ಜೆಡಿಎಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದ ಪ್ರಜ್ವಲ್ ರೇವಣ್ಣ ಅವರು ತೀವ್ರ ಪೈಪೋಟಿ ನೀಡಿದ್ದರು. ಆದರೆ ಮುಂದಿನ ಹಂತದ ಮತಎಣಿಕೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸತತ ಹಿನ್ನೆಡೆ ಅನುಭವಿಸಿ ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ ಅವರ ಭರ್ಜರಿ ಜಯ ಸಾಧಿಸಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಉಳಿದಿದೆ. 16ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾದಾಗ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರು 6,32,090 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

17 ನೇ ಸುತ್ತಿನ ಮತ ಎಣಿಕೆ
ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ – 589829
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ – 632090
42261 ಮತಗಳಿಂದ ಕಾಂಗ್ರೆಸ್ ಮುನ್ನಡೆ
8098 ನೋಟಾ ಮತಗಳು

16ನೇ ಸುತ್ತಿನ ಮತ ಎಣಿಕೆ
ಕಾಂಗ್ರೆಸ್ 6,32,090
ಜೆಡಿಎಸ್ 5,89,829

14ನೇ ಸುತ್ತಿನ ಮತ ಎಣಿಕೆ
ಕಾಂಗ್ರೆಸ್ 6,01,152
ಜೆಡಿಎಸ್ 5,61,687

13ನೇ ಸುತ್ತಿನ ಮತ‌ಎಣಿಕೆ
ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ – 5,46,289
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ – 5,80,418
7603 ನೋಟಾ ಮತಗಳು
34129 ಮತಗಳಿಂದ ಶ್ರೇಯಸ್‌ಪಟೇಲ್ ಮುನ್ನಡೆ

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ