NEWSನಮ್ಮರಾಜ್ಯ

ದ್ವೇಷ ಭಾಷಣ ಪ್ರತಿಬಂಧಕ ಮಸೂದೆ- ರಾಜ್ಯಪಾಲರು ತಿರಸ್ಕರಿಸಿಲ್ಲ”: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಮಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದು, ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದೆ. ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಯೂ ಇಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಮಸೂದೆಯ ಬಗ್ಗೆ ವಿವರಣೆ ನೀಡಲಾಗುವುದು ಎಂದರು.

“ಬ್ಯಾನರ್ ತೆರವು ಬಳ್ಳಾರಿ ಘಟನೆಗೆ ಪ್ರಚೋದನೆ”: ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ತಾಕತ್ತಿದ್ದರೆ ಬಳ್ಳಾರಿಗೆ ಬರುವಂತೆ ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಯಿತು. ಬಿಜೆಪಿ ಪಕ್ಷ ಪಾದಯಾತ್ರೆ ಮಾಡುವ ಅಗತ್ಯ ಏನಿದೆ ಎಂದು ಪ್ರಶ್ನಿಸಿದರು.

ಇನ್ನು ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಕಾರಣವಾಯಿತು. ಜನಾರ್ದನ ರೆಡ್ಡಿ, ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರ ಮೇಲಿನ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Megha
the authorMegha

Leave a Reply

error: Content is protected !!