ಹಾವೇರಿ: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಮೊನ್ನೆ ನಡೆದ ಗಲಭೆ ಸಂಬಂಧ ಯಾರನ್ನೋ ನಾವು ಏಕೆ ಬ್ಲಾಕ್ಮೇಲ್ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಾಂಗ್ರೆಸ್ನ ಕೆಲ ಬಿಬಿಎಂಪಿ ಸದಸ್ಯರಿಗೆ ನೋಟಿಸ್ ನೀಡಿದ್ದೇವೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಿವಕುಮಾರ್ ಅವರಿಗೆ ಈ ನೆಲದ ಕಾನೂನು ಗೊತ್ತಿದೆ ಎಂದು ಭಾವಿಸಿದ್ದೇನೆ. ಗಲಭೆಯಲ್ಲಿ ಯಾರು ಯಾರು ಇದ್ದಾರೆ ಎಂಬುದನ್ನು ತಿಳಿದುಕೊಂಡು, ಅವರನ್ನು ನೇರವಾಗಿ ಬಂಧಿಸಲಿದ್ದೇವೆ. ಹೀಗಾಗಿ ಕೆಲವರಿಗೆ ನೋಟಿಸ್ ಕೊಟ್ಟರೆ ತಪ್ಪೇನು?. ನಾವು ಕಾನೂನಾತ್ಮಕವಾಗಿ ಕೊಟ್ಟಿದ್ದೇವೆ. ಅವರು ತಪ್ಪು ಮಾಡಿದ್ದರೆ ಹೆದರಬೇಕು. ಇಲ್ಲದಿದ್ರೆ ಉತ್ತರ ಕೊಡಬೇಕು. ನಾವು ಕಾನೂನು ಪಾಲನೆ ಮಾಡಿದ್ದೇವೆ ಅಷ್ಟೇ ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಶಾಸಕ ಜಮೀರ್ ಅಹಮ್ಮದ್ ಖಾನ್ ಪರಿಹಾರ ಘೋಷಣೆ ಮಾಡಿದ್ದು ನೋಡಿದ್ರೆ ಅವರು ಯಾರ ಪರವಾಗಿ ಇದ್ದಾರೆ ಎಂಬುದು ಗೊತ್ತಾಗುತ್ತದೆ ಅಂತ ಹೇಳಿದ್ದಾರೆ. ಅಲ್ಲದೆ ಮುಂದಿನ ವಾರದಲ್ಲಿ ಫೇಸ್ಬುಕ್, ವಾಟ್ಸ್ ಆಪ್, ಇನ್ಸ್ಟಾಗ್ರಾಂನಂತಹ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರ ಕರೆದು ಸಭೆ ಮಾಡಲಾಗುವುದು ಎಂದು ಸಚಿವರು ವಿವರಿಸಿದರು.
ಅಖಂಡ ಶ್ರೀನಿವಾಸಮೂರ್ತಿ ಒಬ್ಬ ಜವಾಬ್ದಾರಿಯುತ ಶಾಸಕರು. ಅವರು ಏನು ದೂರು ಕೊಡಬೇಕೋ ಅದನ್ನ ಕೊಟ್ಟಿದ್ದಾರೆ. ಅವರ ದೂರಿನ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. ಶಾಸಕ ಶ್ರೀನಿವಾಸ ಮೂರ್ತಿ ಭದ್ರತೆ ಕೇಳಿದ್ದಾರೆ. ಅವರಿಗೆ ಭದ್ರತೆ ಕೊಟ್ಟಿದ್ದೇವೆ ಎಂದು ಹೇಳಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ತನಿಖೆ ನಡೆಯುತ್ತಿದೆ. ಸುಮಾರು 235 ಆರೋಪಿಗಳನ್ನು ಬಂಧಿಸಿದ್ದು, ಇವರ ಮೂಲಕ ಇನ್ನೂ ಯಾರ್ಯಾರು ಅವರ ಹಿಂದೆ ಇದ್ದಾರೆ, ಏನೇನು ಷಡ್ಯಂತ್ರ ಇದೆ ಎಂಬುದನ್ನು ತನಿಖೆ ಮಾಡ್ತಿದ್ದೇವೆ. ಕೆಲವೇ ದಿನಗಳಲ್ಲಿ ಎಲ್ಲವೂ ಬಹಿರಂಗ ಆಗುತ್ತದೆ ಎಂದು ಬೊಮ್ಮಾಯಿ ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail