NEWS

ಬಿಜೆಪಿ ಶಾಸಕರಿಗೆ ಸ್ಯಾಂಟ್ರೋ ರವಿ  12 ಹುಡುಗಿಯರ  ಪೂರೈಕೆ – ಸಾಕ್ಷಿ ಬಹಿರಂಗಪಡಿಸಲು ಎಚ್‌ಡಿಕೆಗೆ ಎಎಪಿ ಸಲಹೆ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಪರೇಷನ್‌ ಕಮಲದ ಸಂದರ್ಭದಲ್ಲಿ ಮುಂಬೈ ರೆಸಾರ್ಟ್‌ನಲ್ಲಿದ್ದ ಬಿಜೆಪಿ ಪರ ಶಾಸಕರಿಗೆ ಸ್ಯಾಂಟ್ರೋ ರವಿಯು 12 ಹುಡುಗಿಯರನ್ನು ಪೂರೈಸಿದ್ದ ಎಂಬ ಆರೋಪಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಎಚ್.ಡಿ.ಕುಮಾರಸ್ವಾಮಿ ಬಹಿರಂಗಪಡಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡ ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, “ಮುಂಬೈ ರೆಸಾರ್ಟ್‌ಗೆ 12 ಹುಡುಗಿಯರನ್ನು ಪೂರೈಸಲಾಗಿತ್ತು ಎಂಬ ಕುಮಾರಸ್ವಾಮಿಯವರ ಆರೋಪವು ಗಂಭೀರ ಸ್ವರೂಪದ್ದಾಗಿದೆ. ಆದರೆ ಕುಮಾರಸ್ವಾಮಿಯವರು ಕೇವಲ ಹೇಳಿಕೆ ನೀಡಿ ಸುಮ್ಮನಾಗುವ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ.

ಬಿಜೆಪಿಯ ಅನೈತಿಕ ರಾಜಕಾರಣಕ್ಕೆ ಸಂಬಂಧಿಸಿದ ಪುರಾವೆಗಳನ್ನು ಕುಮಾರಸ್ವಾಮಿ ಶೀಘ್ರವೇ ಬಹಿರಂಗ ಪಡಿಸಲಿ. ಹಿಟ್‌ ಅಂಡ್‌ ರನ್‌ ಮಾಡುವ ಬದಲು ಜವಾಬ್ದಾರಿಯುತ ನಾಯಕರಂತೆ ರಾಜ್ಯದ ಜನತೆಯ ಮುಂದೆ ಸಾಕ್ಷಿಗಳನ್ನು ತೆರೆದಿಡಲಿ ಎಂದು ಹೇಳಿದರು.

ರಾಜ್ಯ ಬಿಜೆಪಿಯು ಕೇಂದ್ರ ಬಿಜೆಪಿಯ ಸಹಕಾರದೊಂದಿಗೆ ದೊಡ್ಡ ಪ್ರಮಾಣದ ಅಕ್ರಮಗಳನ್ನು ಮಾಡಿ ಅಧಿಕಾರಕ್ಕೆ ಬಂದಿದೆ. ಚುನಾವಣೆಯಲ್ಲಿ ಜನಾದೇಶ ಬಾರದಿದ್ದರೂ ಶಾಸಕರನ್ನು ಖರೀದಿಸುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಧಿಕಾರ ಪಡೆದುಕೊಂಡಿದೆ.

ಮಹಿಳೆಯರನ್ನು ಬಳಸಿಕೊಂಡು ಅನೈತಿಕ ಚಟುವಟಿಕೆಗಳ ಮೂಲಕ ಶಾಸಕರನ್ನು ರೆಸಾರ್ಟ್‌ನಲ್ಲಿ ಹಿಡಿದಿಟ್ಟುಕೊಳ್ಳುವ ಹಂತಕ್ಕೆ ರಾಜಕಾರಣ ತಲುಪಿರುವುದು ಬಹುದೊಡ್ಡ ದುರಂತ. ಅಧಿಕಾರಕ್ಕಾಗಿ ಬಿಜೆಪಿ ಯಾವ ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದು ಇದರಿಂದ ಸ್ಪಷ್ಟವಾಗಿದೆ ಎಂದರು.

ಭಾರತೀಯ ಸಂಸ್ಕೃತಿಯ ಬಗ್ಗೆ ಪುಖಾಂನುಪುಂಖವಾಗಿ ಮಾತನಾಡುವ ಬಿಜೆಪಿಯವರು ಮಹಿಳೆಯರನ್ನು ಹೀಗೆ ಬಳಸಿಕೊಂಡಿರುವುದು ಖಂಡನೀಯ. ಆಮ್‌ ಆದ್ಮಿ ಪಾರ್ಟಿಯು ಹಲವು ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ. 50ಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ.

ಆದರೆ ಬಿಜೆಪಿಯು ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮಹಿಳೆಯರನ್ನು ಬಳಸಿಕೊಂಡಿದೆ. ಮಹಿಳೆಯರ ವಿಚಾರದಲ್ಲಿ ಎರಡೂ ಪಕ್ಷಗಳಿಗಿರುವ ವ್ಯತ್ಯಾಸವನ್ನು ಇದರಿಂದ ತಿಳಿಯಬಹುದು ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ