NEWSನಮ್ಮರಾಜ್ಯರಾಜಕೀಯ

ಅಧಿವೇಶನದಲ್ಲೇ ಸಚಿವರೊಬ್ಬರ ಹಗರಣ ಬಯಲಿಗೆಳೆಯಲು ಎಚ್‌ಡಿಕೆ ಸಜ್ಜು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸಭೆ ಅಧಿವೇಶನ ನಡೆದಾಗ ಪ್ರತಿ ಬಾರಿಯೂ ದಾಖಲೆ ಬಿಡುಗಡೆ ಮಾಡುತ್ತೇನೆ, ಸಚಿವರ ಹಗರಣ ಬಯಲು ಮಾಡುತ್ತೇನೆ ಎಂದು ಹೇಳುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈ ಬಾರಿಯೂ ಅದನ್ನೇ ಹೇಳಿದ್ದಾರೆ.

ಸೋಮವಾರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎಂಬ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ. ಅದರಲ್ಲೂ ಈ ಬಾರಿ ಸದನದಲ್ಲಿ ದಾಖಲೆ ಇಟ್ಟೇ ಹಗರಣ ಬಯಲು ಮಾಡುತ್ತೇನೆ ಎಂದು ಹೇಳಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರು ಕೂಡಾ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಸರ್ಕಾರದ ಬೃಹತ್‌ ಹಗರಣವನ್ನು ಬಯಲಿಗೆಳೆಯುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಅದರಲ್ಲೂ ಒಬ್ಬ ಸಚಿವರ ಹಗರಣ ಇದು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಅವರು ಈಗಾಗಲೇ ಹಲವು ದಾಖಲೆ ಸಂಗ್ರಹಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಈ ಸಚಿವರು ಯಾರು ಎನ್ನುವುದು ಮಾತ್ರ ನಿಗೂಢವಾಗಿಯೇ ಇದೆ.

ಈ ನಡುವೆ ಕುಮಾರಸ್ವಾಮಿ ಅವರ ಆವಾಜ್‌ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಮೊದಲು ಅಧಿವೇಶನಕ್ಕೆ ಬನ್ನಿ. ಆಮೇಲೆ ಹಗರಣ, ದಾಖಲೆ ಬಿಡುಗಡೆ ಎಲ್ಲ ಎಂದು ಹೇಳಿದೆ. ಈ ನಡುವೆ. ಇಷ್ಟೆಲ್ಲ ರೋಷಾವೇಶ ತೋರಿಸಿರುವ ಕುಮಾರಸ್ವಾಮಿ ಅವರು ಬೆಳಗ್ಗೆ ಎದ್ದುಕೊಂಡು ಹಾಸನಕ್ಕೆ ಹೋಗಿದ್ದಾರೆ. ಅಲ್ಲಿ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗುತ್ತಾರೆ ಎನ್ನಲಾಗಿದೆ.

ಆಗಾಗ ಅಧಿವೇಶನ ಕರೆಯಿರಿ, ಚರ್ಚೆ ಮಾಡಲಿಕ್ಕಿದೆ ಎಂದು ಹೇಳುವ ಕುಮಾರಸ್ವಾಮಿ ಅವರು ಕೊನೆಗೆ ಅಧಿವೇಶನದಲ್ಲಿ ಭಾಗವಹಿಸುವುದು ಮಾತ್ರ ಭಾರಿ ಕಡಿಮೆ. ಇದು ಹೀಗೆ ನಡೆದರೆ ಸಚಿವ ಹಗರಣ ಬಯಲಿಗೆಳೆಯುವುದು ಯಾವಾಗ ಎಂಬ ಪ್ರಶ್ನೆಯೂ ಎದ್ದಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ