CrimeNEWSನಮ್ಮಜಿಲ್ಲೆ

ಸ್ನೇಹಿತರ ಜಗಳ ಬಿಡಿಸಲು ಹೋದ ಗೆಳಯನನ್ನೇ ಹೊಡೆದು ಕೊಂದರು

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಗೆಳೆಯರ ನಡುವೆ ನಡೆಯುತ್ತಿದ್ದ ಜಗಳ ಬಿಡಿಸಲು ಹೋದ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಿವಕುಮಾರ್ ಗಾರಲೋರ (25) ಹತ್ಯೆಯಾದ ಯುವಕ. ಚಂದ್ರಕಾಂತ ಮತ್ತು ಬಸವರಾಜ್ ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳು. ಈ ಮೂವರು ಸ್ನೇಹಿತರಾಗಿದ್ದರು. ಕ್ಷುಲ್ಲಕ ಕಾರಣಕ್ಕೆ ಚಂದ್ರಕಾಂತ ಹಾಗೂ ಬಸವರಾಜ್ ಮಧ್ಯೆ ಗಲಾಟೆ ಶುರುವಾಗಿದೆ. ಗಲಾಟೆ ತಾರಕಕ್ಕೇರಿದ್ದು ದೊಣ್ಣೆ ತೆಗೆದುಕೊಂಡು ಹೊಡೆದಾಡುತ್ತಿದ್ದರು.

ಈ ವೇಳೆ ಸ್ನೇಹಿತರ ನಡುವೆ ಆಗುತ್ತಿದ್ದ ಜಗಳವನ್ನು ಯುವಕ ಬಿಡಿಸಲು ಹೋಗಿದ್ದಾನೆ. ಆದರೆ ಆರೋಪಿಗಳಿಬ್ಬರೂ ಒಬ್ಬರಿಗೊಬ್ಬರಿ ಬಡಿದಾಡಿಕೊಳ್ಳುವಾಗ ಶಿವಕುಮಾರ್‌ಗೆ ದೊಣ್ಣೆಯಿಂದ ಹೊಡೆದ್ದಾರೆ. ದೊಣ್ಣೆಯಿಂದ ಬಿದ್ದ ಹೊಡೆತಕ್ಕೆ ಶಿವಕುಮಾರ್ ವಿಲವಿಲ ಒದ್ದಾಡಿ ಜೀವ ಬಿಟ್ಟಿದ್ದಾನೆ.

ಇದನ್ನು ಗಮನಿಸಿದ ಆರೋಪಿಗಳು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ