- ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು
ದೇವದುರ್ಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಹೆಡ್ ಕಾನ್ಸ್ಟೆಬಲ್ ಒಬ್ಬರು ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಬಸ್ ಸೀಟಿಗಾಗಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು ಅಲ್ಲದೆ ಬಸ್ಗೆ ಕಲ್ಲು ಹೊಡೆದು ಬಸ್ ಮುಂಭಾಗದ ಗ್ಲಾಸ್ ಒಡೆದುಹಾಕಿದ್ದಾನೆ.
ಹೆಡ್ ಕಾನ್ಸ್ಟೆಬಲ್ ಶ್ರೀನಿವಾಸ್ ಎಂಬುವರೆ ಈ ಕೃತ್ಯ ಎಸಗಿದವರು. ಪಟ್ಟಣದಿಂದ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸ್ ದೇವದುರ್ಗದಿಂದ ರಾಯಚೂರಿಗೆ ಹೊರಟಿತ್ತು. ಕರ್ತವ್ಯ ಮುಗಿಸಿಕೊಂಡು ರಾಯಚೂರಿಗೆ ತೆರಳುತ್ತಿದ್ದ ಹೆಡ್ ಕಾನ್ಸ್ಟೆಬಲ್ ಶ್ರೀನಿವಾಸ್ ಬಸ್ನ ಸೀಟ್ ಒಂದರಲ್ಲಿ ಕುಳಿತಿದ್ದ ವೃದ್ಧೆಯೊಬ್ಬರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.
ಈ ವೇಳೆ ಬಸ್ನಲ್ಲಿ ಡ್ಯೂಟಿ ಮಾಡುತ್ತಿದ್ದ ಚಾಲಕ ಕಂ ನಿರ್ವಾಹಕ ಸುರೇಶಬಾಬು ಮತ್ತು ಬಸ್ನಲ್ಲಿದ್ದ ಪ್ರಯಾಣಿಕರು ತಿಳಿ ಹೇಳುವ ಪ್ರಯತ್ನಿಸಿದ್ದಾರೆ. ಆದರೆ, ಅವರ ಮಾತನ್ನು ಕೇಳಿಸಿಕೊಳ್ಳದೆ ಪ್ರಯಾಣಿಕರ ಮೇಲೆಯೇ ರೇಗಾಡಿದ ಹೆಡ್ ಕಾನ್ಸ್ಟೆಬಲ್ ಬಸ್ ಇಳಿದು ಬಂದು ಬಸ್ಗೆ ಕಲ್ಹೋಡೆದಿದ್ದಾರೆ. ಈ ಘಟನೆಯನ್ನು ಸಾರ್ವಜನಿಕರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಬಸ್ನ ಗಾಜು ಒಡೆದ ಬೆನ್ನಲ್ಲೇ ಚಾಲಕ ಸುರೇಶಬಾಬು ಬಸ್ ಅನ್ನು ನೇರವಾಗಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ ಹೆಡ್ ಕಾನ್ಸ್ಟೆಬಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸುರೇಶಬಾಬು ಹಾಗೂ ಪ್ರಯಾಣಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬಸ್ ಚಾಲಕ ಹಾಗೂ ಪ್ರಯಾಣಿಕರಿಗೆ ಹೆಡ್ ಕಾನ್ಸ್ಟೆಬಲ್ ಶ್ರೀನಿವಾಸ ಜೀವ ಬೆದರಿಕೆ ಹಾಕಿದ್ದರು, ಹೆಡ್ ಕಾನ್ಸ್ಟೆಬಲ್ ವಿರುದ್ಧ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದ ಪೊಲೀಸರು ಸಂಧಾನಕ್ಕೂ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇನ್ನು ಹೆಡ್ ಕಾನ್ಸ್ಟೆಬಲ್ ಶ್ರೀನಿವಾಸ ಹಿಂದೆ ಕರ್ತವ್ಯ ಲೋಪದಿಂದ ನಾಲ್ಕು ಬಾರಿ ಅಮಾನತುಗೊಂಡಿದ್ದರು ಎಂದು ಮೂಲಗಳು ಹೇಳಿವೆ.
ಘಟನೆಯಲ್ಲಿ ಹೆಡ್ ಕಾನ್ಸ್ಟೆಬಲ್ ತಪ್ಪಿದೆ ಕಾನೂನು ಸುವ್ಯವಸ್ಥೆ ಬಲ್ಲವರೇ ಈ ರೀತಿ ವರ್ತಿಸಿದ್ದು ಸರಿಯಲ್ಲ ದೂರು ನೀಡುವಂತೆ ನಿರ್ವಾಹಕ ಕಂ ಚಾಲಕನಿಗೆ ತಿಳಿಸಿದ್ದೇವೆ ಎಂದು ಘಟಕ ವ್ಯವಸ್ಥಾಪಕ ರಾಮನಗೌಡ ತಿಳಿಸಿದ್ದಾರೆ.
ಬಸ್ನಲ್ಲಿದ್ದ ಪ್ರಯಾಣಿಕರು, ಕೆಕೆಆರ್ಟಿಸಿ ಸಿಬ್ಬಂದಿಯಿಂದ ಘಟನೆಯ ಕುರಿತು ಮಾಹಿತಿ ಪಡೆದು ದೂರು ದಾಖಲಿಸಿಕೊಳ್ಳಲಾಗುವುದು ಎಂದು ದೇವದುರ್ಗ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಎಸ್. ಮಂಜುನಾಥ ಹೇಳಿದ್ದಾರೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...