CrimeNEWSನಮ್ಮಜಿಲ್ಲೆ

KSRTC ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಚಾಲಕರಿಗೆ ಗಂಭೀರ ಗಾಯ- 20ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಎರಡು ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಇಬ್ಬರು ಚಾಲಕರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ.

ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಮೂಡಿಗೆರೆಯಿಂದ ಬೇಲೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೇಲೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಎರಡು ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸ್ಥಳೀಯರು ಮತ್ತು ಆಂಬುಲೆನ್ಸ್ ಚಾಲಕರ ಸಹಾಯದಿಂದ ಗಾಯಾಳುಗಳನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ. ಅದರಲ್ಲಿ ಕೆಲವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು ಅವರನ್ನು ಬೇರೆಡೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.

ಇನ್ನು ಎರಡೂ ಬಸ್‌ಗಳ ಮುಖಾಮುಖಿ ಡಿಕ್ಕಿಯಿಂದ ಬಸ್‌ ಚಾಲಕರ ಸೀಟ್‌ನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೀಗಾಗಿ ಎರಡೂ ಬಸ್ಸಿನ ಚಾಲಕರಿಗೆ ಗಂಭೀರ ಗಾಯಗಳಾಗಿವೆ. ಮೂಡಿಗೆರೆ ತಾಲೂಕು ಬಹುತೇಕ ಮಲೆನಾಡು ಭಾಗದಿಂದ ಕೂಡಿದೆ. ಇಲ್ಲಿ ಹಾವು ಓಟದ ರಸ್ತೆಗಳೇ ಹೆಚ್ಚು.

ಹೀಗಾಗಿ ವಾಹನ ಚಾಲಕರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸಬೇಕು. ಇಲ್ಲವಾದರೆ ಅಪಘಾತ ಕಟ್ಟಿಟ್ಟ ಬುತ್ತಿ. ಮೂಡಿಗೆರೆ ತಾಲೂಕಿನ ಅಲ್ಲಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿವೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ