
ನ್ಯೂಡೆಲ್ಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Advertisemet
ದೆಹಲಿಯ ಏಮ್ಸ್ ಆಸ್ಪತ್ರೆಗೆ 73 ವರ್ಷದ ಅವರನ್ನು ತಡರಾತ್ರಿ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಉಪರಾಷ್ಟ್ರಪತಿ ಧನಕರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅವರು ಆರೋಗ್ಯ ನೋಡಿಕೊಳ್ಳುವುದಕ್ಕಾಗಿಯೇ ವೈದ್ಯರ ತಂಡವೊಂದು ಮೇಲ್ವಿಚಾರಣೆ ಮಾಡುತ್ತಿದೆ.