NEWSಆರೋಗ್ಯನಮ್ಮಜಿಲ್ಲೆ

ಹೃದಯಾಘಾತ: 6ನೇ ತರಗತಿ ವಿದ್ಯಾರ್ಥಿ ಆಸ್ಪತ್ರೆಗೆ ಕರೆತರುತ್ತಿದ್ದಾಗ ಮಾರ್ಗಮಧ್ಯೆ ಮೃತ

ವಿಜಯಪಥ ಸಮಗ್ರ ಸುದ್ದಿ

ಕೊಡಗು : ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗಮಧ್ಯೆ ಅಸುನೀಗಿರುವ ಘಟನೆ ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ಸಂಭವಿಸಿದೆ.

ಕೀರ್ತನ್ (12) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಎಂಬುವರ ಪುತ್ರ ಕೀರ್ತನ್ ಹೃದಯಾಘಾತದಿಂದ ಮೃತಪಟ್ಟಿರುವುದು ದಂಗು ಬಡಿಸಿದೆ. ಕೀರ್ತನ್ ಕುಶಾಲನಗರ ಸಮೀಪದ ಕೊಪ್ಪಭಾರತ ಮಾತಾ ಶಾಲೆಯಲ್ಲಿ ಓದುತ್ತಿದ್ದ. ಅದೇ ಶಾಲೆಯಲ್ಲೇ ಬಸ್ ಚಾಲಕನಾಗಿ ತಂದೆ ಮಂಜಾಚಾರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶನಿವಾರ ತಡರಾತ್ರಿ ಕೀರ್ತನ್ ಮಲಗಿದ್ದ ಜಾಗದಿಂದಲೇ ಎರಡು ಬಾರಿ ಎದೆ ನೋವು ಎಂದು ಕಿರುಚಿಕೊಂಡಿದ್ದ. ಇದರಿಂದಾಗಿ ಗಾಬರಿಗೊಂಡ ಪಾಲಕರು ಕೂಡಲೇ ಕುಶಾಲನಗರ ಆಸ್ಪತ್ರೆ ಕರೆದೊಯ್ದಿದ್ದಾರೆ. ಆದರೆ ಕೀರ್ತನ್‌ ಆ ವೇಳೆಗಾಗಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಪುಟ್ಟ ಮಕ್ಕಳು ಹೃದಯಾಘಾತದಿಂದ ಮೃತಪಡುವ ನಿದರ್ಶನ ಇತ್ತೀಚಿನ ದಿನಗಳಲ್ಲಿ ಆತಂಕ ಮೂಡಿಸುತ್ತಿದೆ. ಅಲ್ಲದೆ ಪಾಲಕರಲ್ಲೂ ಇಂಥ ಪ್ರಕರಣಗಳು ಭಯವನ್ನು ಹುಟ್ಟಿಸುತ್ತಿವೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ