Please assign a menu to the primary menu location under menu

NEWSಕೃಷಿನಮ್ಮರಾಜ್ಯ

ಇಂದು ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಂಭವ: ಹವಮಾನ ಇಲಾಖೆ ಮುನ್ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದು, ಈ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಇತ್ತ ಬೆಳಗಾವಿ, ಧಾರವಾಡ, ಗದಗ,ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಆರೆಂಜ್​ ಹಾಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್ಗ, ಹಾಸನ, ತುಮಕೂರು, ವಿಜಯಪುರ, ಮೈಸೂರು, ರಾಮನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 35.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನು ನಿನ್ನೆ ತಾಳಿಕೋಟೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಎಚ್​.ಡಿ. ಕೋಟೆ, ಗೋಕಾಕ, ಬೈಲಹೊಂಗಲ, ಬಾದಾಮಿ, ಶಿವಮೊಗ್ಗ, ಆಗುಂಬೆ, ಮಂಕಿ, ಚಿಂತಾಮಣಿ, ನಾಯಕನಹಟ್ಟಿ, ನರಗುಂದ, ಹುಣಸಗಿ, ಹೊನ್ನಾಳಿ, ಸಿದ್ದಾಪುರ, ಲೋಕಾಪುರ, ಆಲಮಟ್ಟಿ, ಹಿಡಕಲ್ ಅಣೆಕಟ್ಟು, ಬೇಗೂರು, ದೇವನಹಳ್ಳಿ, ಮಾಗಡಿ, ಹೊಸಕೋಟೆಯಲ್ಲಿ ಮಳೆಯಾಗಿದೆ.

ಪರಶುರಾಂಪುರ, ಮೂರ್ನಾಡು, ಗುಂಡ್ಲುಪೇಟೆ, ಅಗ್ರಹಾರ, ಕೊಟ್ಟೂರು, ಕಿರವತ್ತಿ, ಹಾವೇರಿ, ನಿಪ್ಪಾಣಿ, ಬಾಗಲಕೋಟೆ, ಬೇವೂರು, ಕೋಲಾರ, ದೊಡ್ಡಬಳ್ಳಾಪುರ, ರಾಮನಗರ, ನಾರಾಯಣಪುರ, ಮಧುಗಿರಿ, ಹಗರಿಬೊಮ್ಮನಹಳ್ಳಿ, ಹಡಗಲಿ, ಶ್ರೀರಂಗಪಟ್ಟಣ, ಮಸ್ಕಿ, ಮುಂಡಗೋಡು, ಕುಶಾಲನಗರ, ಕಮ್ಮರಡಿ, ಕಂಪ್ಲಿ, ಬೆಳ್ಳೂರು, ತಿಪಟೂರು, ಮದ್ದೂರು, ಲಿಂಗಸುಗೂರು, ಸಂಕೇಶ್ವರ, ಚಿಂಚೋಳಿ, ಕಮಲಾಪುರ, ಸೇಡಬಾಳ, ಮುನಿರಾಬಾದ್, ಇಳಕಲ್‌, ಧಾರವಾಡ, ಕೆಂಭಾವಿಯಲ್ಲೂ ಮಳೆಯಾಗಿದೆ.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್