NEWSಕೃಷಿನಮ್ಮರಾಜ್ಯ

ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರಿ ಗಾಳಿ ಮಳೆ: 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯಕ್ಕೆ ಭಾನುವಾರ ಜೂನ್‌ 2ರಂದು ಮುಂಗಾರು ಮಾರುತಗಳ ಪ್ರವೇಶವಾಗಿದೆ. ಹೀಗಾಗಿ, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಮುಂತಾದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ಉಳಿದಂತೆ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 20 ಡಿಗ್ರಿ ಇರಲಿದೆ ಎಂದು ಮಾಹಿತಿ ನೀಡಿದೆ.

ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ನೈಋತ್ಯ ಮಾನ್ಸೂನ್ ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಲಕ್ಷದ್ವೀಪ ಪ್ರದೇಶ, ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ನೈಋತ್ಯ ಬಂಗಾಳ ಕೊಲ್ಲಿಯ ಮಧ್ಯ ಮತ್ತು ವಾಯುವ್ಯ ಭಾಗಗಳಲ್ಲಿ ಮುಂಗಾರು ಮಾರುತಗಳು ಬೀಸುತ್ತಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಮಳೆ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರದಿಂದಲೇ ವರುಣನ ಅಬ್ಬರ ಜೋರಾಗಿದೆ. ಕುಮಾರಸ್ವಾಮಿ ಲೇಔಟ್‌, ಶೇಷಾದ್ರಿಪುರಂ, ಶಿವನಂದ ಸರ್ಕಲ್, ವಿಜಯನಗರ, ಶಿವಾಜಿನಗರ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿನಗರ, ಕೋರಮಂಗಲ ಎಂ.ಜಿ. ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ನಿನ್ನೆ ಮಳೆಯಾಗಿದ್ದು ಇಂದು ಕೂಡ ಭರ್ಜರಿ ಮಳೆಯಾಗಲಿದೆ. ಒಟ್ಟಾರೆ ಈ ವಾರ ಪೂರ್ತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ