NEWSದೇಶ-ವಿದೇಶನಮ್ಮರಾಜ್ಯ

ರಾಜ್ಯದಲ್ಲಿ ಮುಂದಿನ ಎರಡು ದಿನಗಳು ಗುಡುಗು ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಂಗಾಳ ಉಪ ಸಾಗರದ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡು ಕರಾವಳಿಗೆ ವಿವಾರ್‌ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ರಾಜ್ಯದಲ್ಲಿ ಇದೆ 25 ರಿಂದ 27ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಂಡಮಾರುತ ಪ್ರಭಾವ ಬೀರುವ ಸಾಧ್ಯತೆ ಇದೆ. ನವೆಂಬರ್ 25ರಂದು ಪಾಂಡಿಚೆರಿ ಹಾಗೂ ತಮಿಳುನಾಡು ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ರಾಜ್ಯದಲ್ಲಿ ಮಳೆಯಾಗಲಿದೆ ಎಂದರು.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಎರಡು ದಿನ ಎಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇಂದು ಕಾರವಾರದಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ದಾವಣಗೆರೆಯಲ್ಲಿ 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಇನ್ನು ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಮುಂದಿನ ವಾರದಲ್ಲಿ ಚಳಿ ತೀವ್ರಗೊಳ್ಳಲಿದೆ. ಕೆಲವುಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ