NEWSನಮ್ಮರಾಜ್ಯಬೆಂಗಳೂರು

ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ, ನಮ್ಮ ಮೆಟ್ರೋ ಹಳಿ ಮೇಲೆ ಬಿದ್ದ ಮರದ ಕೊಂಬೆ, ಪ್ರಯಾಣಿಕರ ಪರದಾಟ

ಇಂದು ಬೆಳಗ್ಗೆ 10 ಗಂಟೆ ಬಳಿಕ ಭಾರಿ ಬಿಸಿಯ ವಾತಾವರಣ ಸೃಷ್ಟಿಯಾಗಿತ್ತು. ಅದನ್ನು ಗಮನಿಸಿದ ನಾಗರಿಕರು ಇಂದು ಭಾರಿ ಮಳೆ ಬರಲಿದೆ ಎಂದು ಊಹೆ ಮಾಡಿದ್ದರು. ಅದರಂತೆ ಸಂಜೆ ಆಗುತ್ತಿದ್ದಂತೆ ಭಾರಿ ಮಳೆ ಸುರಿದಿದೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೆ ಅಬ್ಬರಿಸಿ ಬೊಬ್ಬಿರಿದಿದ್ದಾನೆ ವರುಣ. ಸಂಜೆ ಜಿಟಿಜಿಟಿಯಾಗಿ ಶುರುವಾದ ಮಳೆ ನೋಡನೋಡುತ್ತಿದ್ದಂತೆ ಜೋರು ಗಾಳಿ ಸಹಿತ ಅಬ್ಬರದಿಂದ ಇಳಿಗೆ ಬಿದ್ದಿದ್ದು, ಕೆಲವೆಡೆ ಅವಾಂತರವನ್ನೇ ಸೇಷ್ಟಿಸಿತು.

ಇಂದು ಬೆಳಗ್ಗೆ 10 ಗಂಟೆ ಬಳಿಕ ಭಾರಿ ಬಿಸಿಯ ವಾತಾವರಣ ಸೃಷ್ಟಿಯಾಗಿತ್ತು. ಅದನ್ನು ಗಮನಿಸಿದ ನಾಗರಿಕರು ಇಂದು ಭಾರಿ ಮಳೆ ಬರಲಿದೆ ಎಂದು ಊಹೆ ಮಾಡಿದ್ದರು. ಅದರಂತೆ ಸಂಜೆ ಆಗುತ್ತಿದ್ದಂತೆ ಭಾರಿ ಮಳೆ ಸುರಿದಿದೆ.

ನಗರದ ಟೌನ್ ಹಾಲ್, ಮೆಜೆಸ್ಟಿಕ್, ಮಾರ್ಕೆಟ್, ವಿಧಾನಸೌಧ ಸುತ್ತಮುತ್ತ ಭಾರಿ ಮಳೆಯಾಗಿ ವಾಹನ ಸವಾರರು ಪರದಾಡಿದ್ದಾರೆ. ಗಾಳಿ ಸಹಿತ ಮಳೆಗೆ ನಮ್ಮ ಮೆಟ್ರೋ ಹಳಿ ಮೇಲೆ ಮರದ ಕೊಂಬೆಯೊಂದು ಬಿದ್ದ ಪರಿಣಾಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಐಟಿಪಿಎಲ್ ಮತ್ತು ಸತ್ಯಸಾಯಿ ಪ್ರಶಾಂತ್ ನಿಲಯಂ ನಡುವೆ ಹಳಿಯ ಮೇಲೆ ಮರದ ಕೊಂಬೆ ಬಿದ್ದ ಹಿನ್ನೆಲೆ ವೈಟ್‌ಫೀಲ್ಡ್ ಮತ್ತು ಗರುಡಾಚಾರ್ ಪಾಳ್ಯ ನಡುವೆ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಇದರಿಂದ ಪ್ರಯಾಣಿಕರು ಪರದಾಡಿದರು.

ಡಿವೈಡರ್ ಕಾಣದೇ ಕಾರು ಹತ್ತಿತ್ತು: ಜೋರಾಗಿ ಸುರಿದ ಮಳೆಯಿಂದಾಗಿ ಡಿವೈಡರ್ ಕಾಣದೇ ಡಿವೈಡರ್ ಮೇಲೆಯೇ ಚಾಲಕನೊಬ್ಬ ಕಾರು ಹತ್ತಿಸಿದ ಘಟನೆ ಪೂರ್ಣಿಮಾ ಥಿಯೆಟರ್ ಬಳಿ ನಡೆದಿದೆ. ಇನ್ನು ಡಿವೈಡರ್‌ನಿಂದ ಕಾರು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

ಭರ್ಜರಿ ಮಳೆಯಿಂದಾಗಿ ನಗರದ ಹಲವು ರಸ್ತೆಗಳು ಕೆರೆಯಂತಾದವು. ಇನ್ನು ಬನಶಂಕರಿ, ಕುಮಾರಸ್ವಾಮಿ ಬಡಾವಣೆ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆಗೆ ವಾಹನ ಸವಾರರು ಪರದಾಡಿದ್ದಾರೆ. ದ್ವಿಚಕ್ರ ವಾಹನ ಸವಾರರು, ಆಟೋ ಸವಾರರು ಅಕ್ಷರಶಃ ನಲುಗಿ ಹೋಗಿದ್ದಾರೆ.

ಇನ್ನು ಅತ್ತ ಶಿವಾನಂದ ಸರ್ಕಲ್ ಬಳಿಯ ಬೆಂಗಳೂರು ಕೆಫೆಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು. ಇತ್ತ ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ ಬಾಣಾವರ ಭಾಗದಲ್ಲಿ ಮಳೆಯಾಗಿದ್ದು, ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದರು. ಮೂರು ಗಂಟೆಗಳ ಕಾಲ ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು ಜನರು ಎಚ್ಚರಿಕೆಯಿಂದ ಓಡಾಡಬೇಕಿದೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ