CrimeNEWSನಮ್ಮಜಿಲ್ಲೆ

ಭಾರಿ ಮಳೆ ಸ್ಮಶಾನಕ್ಕೆ ಹೋಗಲು ಪರದಾಟ: 2 ದಿನದ ಬಳಿಕ ಅಂತ್ಯಕ್ರಿಯೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ನಿಧನರಾಗಿರುವ ವ್ಯಕ್ತಿಯ ಶವವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಎರಡು ದಿನಗಳ ಕಾಲ ಮನೆಯಲ್ಲೇ ಇಟ್ಟುಕೊಂಡಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ದೇವನೂರು ಸಮೀಪದ ಎಸ್.ಬೊಮ್ಮೇನಹಳ್ಳಿಯಲ್ಲಿ ನಡೆದಿದೆ.

ಪ್ರಮೋದ್ (55) ನಿಧನ ಹೊಂದಿದವರು. ಮೃತದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯಲು ದಾರಿ ಇಲ್ಲದೆ ಜನ ಪರದಾಡಿದ್ದು, ಎರಡು ದಿನಗಳ ಬಳಿಕ ಅಂತ್ಯಕ್ರಿಯೆ ಮಾಡಿದ್ದಾರೆ.

ಕಡೂರು ತಾಲೂಕಿನ ಚಿಕ್ಕ ದೇವನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್. ಬೊಮ್ಮನಹಳ್ಳಿಯಲ್ಲಿ ಬಹಳ ವರ್ಷಗಳ ನಂತರ ದೇವನೂರು ಕೆರೆ ತುಂಬಿದ್ದು, ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿತ್ತು. ಹೀಗಾಗಿ ಈ ಗ್ರಾಮದಿಂದ ಸ್ಮಶಾನಕ್ಕೆ ಹೋಗುವ ದಾರಿ ಕೂಡ ನೀರಿನಿಂದ ಜಲಾವೃತವಾಗಿದೆ. ಮೃತದೇಹ ಕೊಂಡೊಯ್ಯಲು ಸಾಧ್ಯವಾಗದಿರುವುದರಿಂದ ಎರಡು ದಿನಗಳ ಕಾಲ ಶವವಿಟ್ಟು ಕಾದಿದ್ದಾರೆ.

ಬಳಿಕ ನೀರು ಸ್ವಲ್ಪ ಕಡಿಮೆಯಾದ ನಂತರ ನೀರಲ್ಲೇ ಶವವನ್ನು ಸ್ಮಶಾನಕ್ಕೆ ಗ್ರಾಮಸ್ಥರು ತೆಗೆದುಕೊಂಡು ಹೋಗಿದ್ದಾರೆ. ದೇವರು ವರ ಕೊಟ್ಟರು, ಪೂಜಾರಿ ಕೊಡಲಿಲ್ಲ ಎನ್ನುವ ಹಾಗೆ, ವಶ ಹೊಳಲು ಗುಂಡಿ ತೆಗೆದರೂ ಬರೀ ನೀರೇ ಬಂದಿದೆ. ಹೀಗಾಗಿ ಶವಸಂಸ್ಕಾರ ಮಾಡಲು ಗ್ರಾಮಸ್ಥರು ಪರದಾಡಿದ್ದಾರೆ. ಬಳಿಕ ಸ್ವಲ್ಪ ಎತ್ತರದ ಭಾಗದಲ್ಲಿ ಗುಂಡಿ ತೆಗೆದು ಅಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಈ ಸಮಸ್ಯೆ ಇಂದು-ನಿನ್ನೆಯದ್ದಲ್ಲ. ಹಲವಾರು ವರ್ಷಗಳಿಂದಲೂ ಇದೇ. ಆದರೆ, ಜನಪ್ರತಿನಿಧಿಗಳು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಗ್ರಾಮಸ್ಥರು ಹಲವು ಬಾರಿ ಈ ಸಮಸ್ಯೆ ಬಗ್ಗೆ ಇವರ ಬಳಿ ಹೇಳಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ.

ಇನ್ನು ಸರ್ಕಾರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಬೆಸತ್ತು ಸ್ಥಳೀಯರು ಮುಂದಿನ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದು, ಕೂಡಲೇ ಈ ಬಗ್ಗೆ ಗಮನ ನೀಡಿ ರಸ್ತೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ