ಬೆಂಗಳೂರು: ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕರೆತರುವಾಗ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಎಂದು ಆದೇಶ ಹೊರಡಿಲಾಗಿದೆ.
ಬೆಂಗಳೂರು ಸಂಚಾರಿ ಪೊಲೀಸರು ಶಾಲೆಗಳ ಬಳಿ ವಿಶೇಷ ಕಾರ್ಯಾಚರಣೆಯನ್ನು ನಡೆಸಿದ್ದರು. ಈ ವೇಳೆ ಮಕ್ಕಳು ಹೆಲ್ಮೆಟ್ ಧರಿಸದೇ ಬಂದ ಹಿನ್ನೆಲೆಯಲ್ಲಿ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ಈ ಆದೇಶವನ್ನು ಹೊರಡಿಸಲಾಗಿದೆ.
ಇನ್ನು ಇದರ ಜತೆಗೆ ಮೂರಕ್ಕೂ ಹೆಚ್ಚು ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವಂತಿಲ್ಲ. ಒಂದು ವೇಳೆ ಕರೆದುಕೊಂಡು ಹೋದರೆ ಅಂತಹ ಪೋಷಕರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಶಾಲಾ ಆಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಕೂರಿಸಿಕೊಂಡರೂ ಕ್ರಮಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ.