CRIMENEWSನಮ್ಮರಾಜ್ಯ

KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ

ದ್ವಂದ್ವ ನಿಲುವು ತಾಳಿದ್ದಕ್ಕೆ ನಿಗಮವು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 25 ಸಾವಿರ ರೂ. ದಂಡ ಪಾವತಿಸಬೇಕು. ದಂಡದ ಮೊತ್ತವನ್ನು ಈ ಮೊಕದ್ದಮೆ ಹೂಡಲು ಕಾರಣರಾದ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಲ್ಲಿ ಆಂತರಿಕ ಶಿಸ್ತು ಕ್ರಮದ ಮಾಹಿತಿ ಕಡ್ಡಾಯವಾಗಿ ನ್ಯಾಯಾಲಯಕ್ಕೆ ಬಹಿರಂಗಪಡಿಸಬೇಕು ಮತ್ತು ಇಂತಹ ದ್ವಂದ್ವ ನಿಲುವುಗಳನ್ನು ತಡೆಗಟ್ಟಲು ನಿಗಮವು ಪ್ರತ್ಯೇಕ ಪರಿಶೀಲನಾ ಸಮಿತಿ ರಚಿಸಬೇಕು. ಈ ಸಂಬಂಧ ಸೂಕ್ತ ಸುತ್ತೋಲೆ ಹೊರಡಿಸಬೇಕು ಎಂದು ನ್ಯಾಯಾಲಯ ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಸ್‌ ಅಪಘಾತದಿಂದಾಗಿ ಮೃತಪಟ್ಟಿದ್ದ ವ್ಯಕ್ತಿಯ ಪ್ರಕರಣವೊಂದರಲ್ಲಿ ತನ್ನದೇ ತಪ್ಪನ್ನು ಮುಚ್ಚಿಟ್ಟು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡುವ ಮೂಲಕ ಕೋರ್ಟ್‌ ಹಾದಿ ತಪ್ಪಿಸಲು ಯತ್ನಿಸಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಕ್ರಮವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕನಾ೯ಟಕ ಹೈಕೋರ್ಟ್‌, ನಿಗಮಕ್ಕೆ 25 ಸಾವಿರ ರೂ. ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದೆ.

ಮೊದಲು ಈ ಈ ಪ್ರಕರಣ ಸಂಬಂಧ ಸಿಬ್ಬಂದಿಯ ತಪ್ಪನ್ನು ಒಪ್ಪಿಕೊಂಡು ಆ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಿದೆ. ಇತ್ತ ಬಂದು ಸಂತ್ರಸ್ತರದ್ದೇ ತಪ್ಪೆಂದು ದ್ವಂದ್ವ ನಿಲುವು ಪ್ರದರ್ಶನ ಮಾಡುವುದರ ಮೂಲಕ ನ್ಯಾಯಾಂಗ ಪ್ರಕ್ರಿಯೆಯ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಈ ಹಿಂದೆ ಆದೇಶ ಹೊರಡಿಸಿದ್ದ ಅಪಘಾತಗಳ ಪರಿಹಾರ ನ್ಯಾಯಾಧಿಕರಣದ ತೀರ್ಪನ್ನು ಪ್ರಶ್ನಿಸಿ ಕೆಕೆಆರ್‌ಟಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಮತ್ತು ನ್ಯಾಯಮೂರ್ತಿ ಡಾ. ಚಿಲ್ಲಕೂರು ಸುಮಲತಾ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ನಿಗಮದ ವಾದಕ್ಕೆ ತೀವ್ರ ಅಸಮಾಧಾನ:
ಅಪಘಾತಕ್ಕೆ ಸಂಬಂಧಿಸಿದಂತೆ ನಿಗಮವು ಈಗಾಗಲೇ ಆಂತರಿಕ ಶಿಸ್ತು ಕ್ರಮ ಕೈಗೊಂಡು ಅಪಘಾತಕ್ಕೆ ಕಾರಣನಾದ ಗುತ್ತಿಗೆ ಆಧಾರಿತ ಚಾಲಕನನ್ನು ಸೇವೆಯಿಂದ ವಜಾಗೊಳಿಸಿದೆ. ಅಲ್ಲದೆ, ನಿರ್ವಾಹಕನ ವಾರ್ಷಿಕ ವೇತನ ಬಡ್ತಿಯನ್ನೂ ಕಡಿತಗೊಳಿಸಿದೆ. ಪ್ರಕರಣದಲ್ಲಿ ತನ್ನದೇ ನೌಕರರ ತಪ್ಪು ಎಂದು ಒಪ್ಪಿಕೊಂಡು ಶಿಕ್ಷೆ ನೀಡಿದೆ. ಹೀಗಿದ್ದರೂ ಮೃತರದ್ದೇ ತಪ್ಪು ಎಂದು ಹೈಕೋರ್ಟ್‌ನಲ್ಲಿ ವಾದಿಸಿರುವುದು ಸರಿಯಲ್ಲ ಎಂದು ನ್ಯಾಯಪೀಠ ನಿಗಮದ ವಾದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನು ಒಂದೆಡೆ ನೌಕರರನ್ನು ವಜಾ ಮಾಡಿ, ಮತ್ತೊಂದೆಡೆ ಅಪಘಾತಕ್ಕೆ ಮೃತ ವ್ಯಕ್ತಿಯೇ ಕಾರಣನೆಂದು ಹೇಳುವುದು ದ್ವಂದ್ವ ನಿಲುವು ಮತ್ತು ಕಾನೂನುಬಾಹಿರ. ಅಲ್ಲದೆ, ನ್ಯಾಯಾಲಯಕ್ಕೆ ಬರುವ ದಾವೆದಾರರು ಶುದ್ಧ ಹಸ್ತದಿಂದ ಬರಬೇಕಾಗಿದ್ದು, ತಪ್ಪು ಮಾಹಿತಿ ನೀಡಿದಲ್ಲಿ ಯಾವುದೇ ಪರಿಹಾರ ಪಡೆಯುವುದಕ್ಕೆ ಅರ್ಹರಾಗಿರುವುದಿಲ್ಲ. ಈ ರೀತಿಯ ಕ್ರಮ ನ್ಯಾಯಾಂಗ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ ಎಂದು ನ್ಯಾಯಪೀಠ ಹೇಳಿದೆ.

ದ್ವಂದ್ವ ನಿಲುವಿಗೆ 25 ಸಾವಿರ ರೂ. ದಂಡ: ನಿಗಮವು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ 25 ಸಾವಿರ ರೂ. ದಂಡ ಪಾವತಿಸಬೇಕು. ದಂಡದ ಮೊತ್ತವನ್ನು ಈ ಮೊಕದ್ದಮೆ ಹೂಡಲು ಕಾರಣರಾದ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಲ್ಲಿ ಆಂತರಿಕ ಶಿಸ್ತು ಕ್ರಮದ ಮಾಹಿತಿ ಕಡ್ಡಾಯವಾಗಿ ನ್ಯಾಯಾಲಯಕ್ಕೆ ಬಹಿರಂಗಪಡಿಸಬೇಕು ಮತ್ತು ಇಂತಹ ದ್ವಂದ್ವ ನಿಲುವುಗಳನ್ನು ತಡೆಗಟ್ಟಲು ನಿಗಮವು ಪ್ರತ್ಯೇಕ ಪರಿಶೀಲನಾ ಸಮಿತಿ ರಚಿಸಬೇಕು. ಈ ಸಂಬಂಧ ಸೂಕ್ತ ಸುತ್ತೋಲೆ ಹೊರಡಿಸಬೇಕು ಎಂದು ನ್ಯಾಯಾಲಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.

ಕೆಕೆಆರ್‌ಟಿಸಿ ಪರ ವಾದಿಸಿದ ವಕೀಲರು: ಮೃತ ವ್ಯಕ್ತಿಯೇ ಬಸ್‌ನ ಬಾಗಿಲಲ್ಲಿ ನಿಂತು ನಿರ್ಲಕ್ಷ್ಯತನದಿಂದ ಪ್ರಯಾಣ ಮಾಡಿದ್ದಾರೆ. ಇದರಿಂದ ಘಟನೆ ನಡೆದಿದ್ದು, ನಿಗಮದಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ಕೆಕೆಆರ್‌ಟಿಸಿ ಪರ ವಕೀಲರು ವಾದಿಸಿದರು. ಈ ವೇಳೆ ಘಟನೆ ಸಂಬಂಧ ನಿಗಮದ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್‌ ಪ್ರಶ್ನಿಸಿತ್ತು. ಅದಕ್ಕೆ ಉತ್ತರಿಸಿದ್ದ ವಕೀಲರು, ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಚಾಲಕನನ್ನು ಈಗಾಗಲೇ ಸೇವೆಯಿಂದ ವಜಾಗೊಳಿಸಲಾಗಿದೆ. ಕರ್ತವ್ಯ ಲೋಪವೆಸಗಿದ ಆರೋಪದಡಿ ನಿರ್ವಾಹಕನ ಒಂದು ವೇತನ ಬಡ್ತಿಯನ್ನು ಕಡಿತಗೊಳಿಸಲಾಗಿದೆ ಎಂದು ತಿಳಿಸಿದರು.

ಪ್ರಕರಣದ ಹಿನ್ನೆಲೆ: ಬಸ್‌ ಅಪಘಾತದಲ್ಲಿ ವಿನೋದ್‌ಕುಮಾರ್‌ ಮಾನೆ ಎಂಬುವವರು ಮೃತಪಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಮೋಟಾರು ವಾಹನಗಳ ಅಪಘಾತ ಪರಿಹಾರ ನ್ಯಾಯಾಧಿಕರಣ ಮೃತರ ಕುಟುಂಬಕ್ಕೆ ಅಪಘಾತ ನಡೆದ ದಿನದಿಂದ ಶೇ.6 ರ ಬಡ್ಡಿ ದರದಲ್ಲಿ1,10,36,200 ರೂ. ಪರಿಹಾರ ನೀಡಲು 2025 ರ ಮಾ.14 ರಂದು ಕೆಕೆಆರ್‌ಟಿಸಿಗೆ ಸೂಚನೆ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಾರಿಗೆ ನಿಗಮವು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ