NEWSಆರೋಗ್ಯನಮ್ಮಜಿಲ್ಲೆ

ಕೊರೊನಾದಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ ತುಸು ಸಂತಸದ ನ್ಯೂಸ್‌ ಕೊಟ್ಟ ಹೈ ಕೋರ್ಟ್‌

ಕೊರೊನಾದಿಂದ ಸಾರಿಗೆ ನೌಕರರು ಮೃತಪಟ್ಟರೆ ಅವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಕಲ್ಪಿಸುವುದಾಗಿ 2021ರ ಫೆ. 10ರಂದು ಸುತ್ತೋಲೆ ಹೊರಡಿಸಿದೆ ಸಾರಿಗೆ ಇಲಾಖೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ರಾಜ್ಯದ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ನೌಕರರ ಕುಟುಂಬದ ಸದಸ್ಯರಿಗೆ 30 ಲಕ್ಷ ರೂ. ಪರಿಹಾರ ಒದಗಿಸುವ ಕುರಿತಂತೆ ಕರ್ನಾಟಕ ಹೈಕೋರ್ಟ್​ ರಾಜ್ಯ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದೆ.

ತಹೇರ್ ಹುಸೈನ್ ಮತ್ತು ಅಜೀಜ್ ಪಾಷಾ ಜಾಗೀರದಾರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ನಿಗಮ (ಬಿಎಂಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಮತ್ತು ವಾಯವ್ಯ ರಸ್ತೆ ಸಾರಿಗೆ ನಿಗಮಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಅರ್ಜಿದಾರರ  ಮನವಿಯಲ್ಲೇನಿದೆ: ಕೊರೊನಾದಿಂದ ಸಾರಿಗೆ ನೌಕರರು ಮೃತಪಟ್ಟರೆ ಅವರ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ಕಲ್ಪಿಸುವುದಾಗಿ ತಿಳಿಸಿ ಸಾರಿಗೆ ಇಲಾಖೆ 2021ರ ಫೆ.10ರಂದು ಸುತ್ತೋಲೆ ಹೊರಡಿಸಿತ್ತು.

ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿ ಪ್ರಕಾರ, 2020ರ ಮಾರ್ಚ್‌ನಿಂದ 2021ರ ಜೂನ್‌ವರೆಗೆ ಕೋವಿಡ್‌ನಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ 351 ನೌಕರರು ಮೃತಪಟ್ಟಿದ್ದಾರೆ. ಅದರಲ್ಲಿ ಕೇವಲ 11 ನೌಕರರ ಕುಟುಂಬಗಳಿಗೆ ಪರಿಹಾರ ವಿತರಣೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಕೊರೊನಾದಿಂದ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ವಿವಿಧ ವಿಭಾಗಗಳಲ್ಲಿ 2020ರ ಮಾರ್ಚ್‌ನಿಂದ ಈವರೆಗೆ ಮೃತಪಟ್ಟವ ನೌಕರರ ಮಾಹಿತಿ ಒದಗಿಸಬೇಕು. 2021ರ ಫೆ. 10ರಂದು ರಾಜ್ಯ ಸಾರಿಗೆ ಇಲಾಖೆ ಹೊರಡಿಸಿರುವ ಸುತ್ತೋಲೆ ಜಾರಿಗೊಳಿಸಬೇಕು.

ಸಾರಿಗೆ ನಿಗಮಗಳ ನೌಕರರು ಕೊರೊನಾದಿಂದ ಮೃತಪಟ್ಟ ಪ್ರಕರಣ ಸಂಬಂಧ ಮೃತ ನೌಕರರ ಕುಟುಂಬ ಸದಸ್ಯರು ಅಥವಾ ಅವಲಂಬಿತರಿಗೆ ಯಾವುದೇ ವಿಳಂಬವಿಲ್ಲದೆ ಕೂಡಲೇ 30 ಲಕ್ಷ ರೂ. ಪರಿಹಾರ ಪಾವತಿಸುವುದನ್ನು ಖಾತರಿಪಡಿಸಬೇಕು. ಸಾರಿಗೆ ನೌಕರರ ಕುಟುಂಬಗಳಿಗೆ ಪರಿಹಾರ ವಿತರಿಸಲು ಅಗತ್ಯ ಹಣಕಾಸು ಬಿಡುಗಡೆ ಮಾಡಲು ಸರ್ಕಾರ ಮತ್ತು ಸಾರಿಗೆ ನಿಗಮಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದಿಷ್ಟೇ ಅಲ್ಲದೆ, ಮೃತಪಟ್ಟ ನೌಕರರ ಅರ್ಹ ಅವಲಂಬಿತರಿಗೆ ತಾತ್ಕಾಲಿಕ ಪರಿಹಾರವಾಗಿ ಕೂಡಲೇ 10 ಲಕ್ಷ ರೂ. ಪರಿಹಾರ ಪಾವತಿಸಲು ಸರ್ಕಾರ ಹಾಗೂ ಸಾರಿಗೆ ನಿಗಮಗಳಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ.

ಈ ಮನವಿಯನ್ನು ಪರಿಗಣಿಸಿರುವ ನ್ಯಾಯಪೀಠ ಸಾರಿಗೆ ಇಲಾಖೆ ಮತ್ತು ನಾಲ್ಕೂ ನಿಗಮಗಳಿಗೂ ನೋಟಿಸ್‌ ಜಾರಿ ವಿಚಾರಣೆ ಮುಂದೂಡಿತು.

ಈ ಬೆಳವಣಿಗೆ ನೋಡಿದೆ ಕೊರೊನಾದಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬದವರಿಗೆ ಪರಿಹಾರ ಸಿಗುವುದು ಬಹುತೇಕ ಖಚಿತವಾಗಲಿದೆ ಎಂದೇ ಹೇಳಬಹುದು. ಕಾರಣ ಡ್ಯೂಟಿಯಲ್ಲಿ ಇದ್ದವೇಳೆ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದುವ ದಾಖಲೆಗಳನ್ನು ಮೃತ ನೌಕರರ ಕುಟುಂಬದವರು ನಿಗಮಗಳ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಆದರೆ ಪರಿಹಾರ ಮಾತ್ರ ಇನ್ನು ಕೊಟ್ಟಿಲ್ಲ.

ಜತೆಗೆ ಕೊರೊನಾದಿಂದ ನಿಗಮಗಳ ಎಷ್ಟು ನೌಕರರು ಮೃತಪಟ್ಟಿದ್ದಾರೆ ಎಂಬ ಮಾಹಿತಿಯನ್ನು ನಿಗಮಗಳ ಕೊಡುವಲ್ಲಿಯೂ ಈ ಹಿಂದೆ ವಿಫಲವಾಗಿವೆ.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC