CrimeNEWSನಮ್ಮರಾಜ್ಯ

ಪೊಲೀಸರ ವಿರುದ್ಧ ಅಸಂಸದೀಯ ಪದ ಬಳಕೆ ಆರೋಪದಡಿ ಇಬ್ಬರ ವಿರುದ್ಧ ದಾಖಲಾಗಿದ್ದ ಕೇಸ್ ರದ್ದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೊಲೀಸ್ ಅಧಿಕಾರಿಗಳ ವಿರುದ್ಧ ಅಸಂಸದೀಯ ಪದ ಬಳಸಿದ ಆರಫೊದಡಿ ಚನ್ನಪಟ್ಟಣದ ಇಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ.

ಚನ್ನಪಟ್ಟಣದ ನಿವಾಸಿಗಳಾದ ಸಯದ್‌ ಇಬ್ರಾಹಿಂ ಮತ್ತು ಸಯದ್‌ ಮುಜಾಹಿದ್‌ ಎಂಬುವರು ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರ ಪೀಠ ವಿಚಾರಣೆ ಬಳಿಕ ಈ ಆದೇಶ ಮಾಡಿದೆ.

ಘಟನೆ ವಿವರ: ಬಲಪ್ರಯೋಗ ಮಾಡಿ ಸರ್ಕಾರಿ ನೌಕರರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಈ ಇಬ್ಬರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ತಮ್ಮ ವಿರುದ್ಧ ಚನ್ನಪಟ್ಟಣ ಪೂರ್ವ ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಇಬ್ಬರೂ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಅರ್ಜಿದಾರರು ಪೊಲೀಸರ ಮೇಲೆ ಯಾವುದೇ ಬಲ ಪ್ರಯೋಗ ಅಥವಾ ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಿಲ್ಲ. ಇನ್ನು ಬಲವಂತವಾಗಿ ಸರ್ಕಾರಿ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ಬಲಪ್ರಯೋಗ ಮಾಡಿರಬೇಕು ಅಥವಾ ಹಲ್ಲೆ ನಡೆಸಿರಬೇಕು.

ಆದರೆ, ಈ ಕೃತ್ಯ ಎಸಗಿರುವ ಸಂಬಂಧ ಅರ್ಜಿದಾರರ ವಿರುದ್ಧ ಯಾವುದೇ ಆರೋಪಗಳಿಲ್ಲ. ಹಲ್ಲೆ ಅಥವಾ ಬಲಪ್ರಯೋಗವನ್ನು ಬಳಸಿ ಸರ್ಕಾರಿ ಸೇವಕರ ಕರ್ತವ್ಯ ನಿರ್ವಹಣೆಯಿಂದ ತಡೆಯಲಾಗಿದೆ ಎಂಬುದನ್ನು ಸಾಬೀತುಪಡಿಸಲು, ಅರ್ಜಿದಾರರು ಪೊಲೀಸ್ ಸಿಬ್ಬಂದಿ ನಿಂದಿಸಿ ಬೆದರಿಕೆ ಹಾಕಿರುವುದಷ್ಟೇ ಸಾಕಾಗುವುದಿಲ್ಲ, ಆರೋಪ ಸಾಬೀತಿಗೆ ಸಾಕ್ಷಿಗಳೂ ಇಲ್ಲ ಎಂದು ಪ್ರಕರಣ ರದ್ದುಪಡಿಸಿದೆ.

2020ರಲ್ಲಿ ರಾತ್ರಿ 11.30ರ ನಂತರವೂ ಹೋಟೆಲ್‌ ತೆರೆದಿದ್ದ ಹಿನ್ನೆಲೆಯಲ್ಲಿ ಅದನ್ನು ನಡೆಸುತ್ತಿದ್ದ ಅರ್ಜಿದಾರರನ್ನು ಪೊಲೀಸರು ಪ್ರಶ್ನೆ ಮಾಡಿದ್ದರು. ಆಗ ಅರ್ಜಿದಾರರು ಪೊಲೀಸರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದರ ಜತೆಗೆ, ಭೀಕರ ಪರಿಣಾಮ ಎದರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು. ಆ ಮೂಲಕ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಲಾಗಿತ್ತು.

ಆ ಸಂಬಂಧ ಅವರ ವಿರುದ್ಧ ಆದೇಶ ಉಲ್ಲಂಘನೆ, ಸಂಯಮ ಮೀರಿದ ಅಪರಾಧಿಕ ಬಲ ಬಳಸಿ ಸರ್ಕಾರಿ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಚನ್ನಪಟ್ಟಣ ಪೂರ್ವ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು. ಪ್ರಕರಣ ಚನ್ನಪಟ್ಟಣದ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿತ್ತು. ಅದನ್ನು ರದ್ದುಪಡಿಸಲು ಕೋರಿ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದರು.

ಎರಡು ಕಡೆ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರ ಪೀಠ ಈ ಇಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು