NEWSನಮ್ಮರಾಜ್ಯಶಿಕ್ಷಣ-

5, 8, 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಪಠ್ಯಕ್ರಮ ಇರುವ ಶಾಲೆಗಳಲ್ಲಿ ಕಲಿಯುತ್ತಿರುವ 5, 8, 9 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿ ಇಂದು ಆದೇಶ ಹೊರಡಿಸಿದೆ.

5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ತೀರ್ಪು ನೀಡಿದೆ.

ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 11 ರಿಂದ ಮಾ.18 ವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯಿದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ, ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.

ಅದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ.

ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ. ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದರು.

ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಕೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ.

ಈ ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿಕೊಂಡರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ