Search By Date & Category

NEWSಶಿಕ್ಷಣ-

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿ ತೀರ್ಪು ಪ್ರಕಟಿಸಿದೆ.

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ. 10 ದಿನಗಳ ಬಳಿಕ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿತು.

ಪಠ್ಯಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳವಂತಿಲ್ಲ. ಪರೀಕ್ಷೆ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಫಲಿತಾಂಶವನ್ನು ಶಾಲೆಗೆ ತಲುಪಿಸಬೇಕು ಎಂದು ವಿಭಾಗೀಯ ಪೀಠ ಸೂಚನೆ ನೀಡಿದೆ.

Leave a Reply

error: Content is protected !!