ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿರುವ ಪ್ರಕರಣ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಘಟನೆ ಕುರಿತು ಇಂದು ಜೂನ್ 5ರ ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದ್ದು, ಎ.ಜಿ. ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದಾರೆ.
Related

Megha
 










