NEWSನಮ್ಮಜಿಲ್ಲೆನಮ್ಮರಾಜ್ಯ

ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ

ಇದೇ ಮೇ 20ರಿಂದ ಅಂದರೆ ನಾಳೆಯಿಂದ ಸಾರಿಗೆ ನೌಕರರ ಪರವಾಗಿ ಜಂ ಟಿ ಕ್ರಿಯಾ ಸಮಿತಿ ಹಮ್ಮಿಕೊಂಡಿದ್ದ ಮುಷ್ಕರ ಪ್ರಶ್ನಿಸಿ ಹೈಕೋರ್ಟ್​​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇನ್ನೂ ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿದ್ದು, ಮುಷ್ಕರವನ್ನು ನಡೆಸದಂತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್​ ಸೂಚನೆ ನೀಡಿದೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಮೇ 20ರಿಂದ (ಬುಧವಾರ) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ ಇದೀಗ ಹೈ ಕೋರ್ಟ್‌ ವಿಭಾಗೀಯ ಪೀಠ ಮುಷ್ಕರಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.

ಇದೇ ಮೇ 20ರಿಂದ ಅಂದರೆ ನಾಳೆಯಿಂದ ಸಾರಿಗೆ ನೌಕರರ ಪರವಾಗಿ ಜಂ ಟಿ ಕ್ರಿಯಾ ಸಮಿತಿ ಹಮ್ಮಿಕೊಂಡಿದ್ದ ಮುಷ್ಕರ ಪ್ರಶ್ನಿಸಿ ಹೈಕೋರ್ಟ್​​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇನ್ನೂ ಈ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿದ್ದು, ಮುಷ್ಕರವನ್ನು ನಡೆಸದಂತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್​ ಸೂಚನೆ ನೀಡಿದೆ.

ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. ಜತೆಗೆ 26 ತಿಂಗಳ ಹಿಂಬಾಕಿಯನ್ನೂ ನೀಡಲಾಗಿದೆ. ಆದರೆ, ವೇತನ ಪರಿಷ್ಕರಣೆ ಹಾಗೂ ಹಿಂಬಾಕಿ ವೇತನ ಕಾನೂನು ಬದ್ಧವಾಗಿ ನಮ್ಮ ಕೈ ಸೇರಿಲ್ಲ ಅಂತ ಅಸಮಾಧಾನಗೊಂಡಿರುವ ನೌಕರರ ನ್ಯಾಯಬದ್ಧವಾಗಿ ಬರಬೇಕಿರುವುದನ್ನು ನಮಗೆ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ.

ಆದರೆ, ನಮಗೆ 38 ತಿಂಗಳ ಬಾಕಿ ವೇತನ ಬರಬೇಕು, ಈಗ ಆಗಿರುವ ವೇತನ ಪರಿಷ್ಕರಣೆಯಿಂದ ನಮಗೆ ಅನ್ಯಾಯವಾಗಿದೆ ಇದನ್ನು ಸರಿಪಡಿಸಿಕೊಡಿ ಎಂದು ಸಾರಿಗೆ ನೌಕರರ ಸಂಘಟನೆಗಳು ಪಟ್ಟು ಹಿಡಿದಿವೆ.

ಸರ್ಕಾರ ಹಾಗೂ ಸಾರಿಗೆ ನೌಕರರ ಸಂಘಟನೆ ಜತೆಗೆ ಹೀಗಾಗಲೇ ಸಿಎಂ ಚರ್ಚೆ ನಡೆಸಿದ್ದು, ಹಿಂಬಾಕಿ ವೇತನ ಹಾಗೂ ವೇತನ ಪರಿಷ್ಕರಣೆಯಲ್ಲಿ ಆಗಿರುವ ದೋಷ ಸರಿಪಡಿಸಲು ಸಿದ್ದರಾಮಯ್ಯ ಒಪ್ಪಿಗೆ ನೀಡಿಲ್ಲ. ವೇತನ ಪರಿಷ್ಕರಣೆ ವಿಚಾರದಲ್ಲಿ ಒಮ್ಮತದ ನಿರ್ಧಾರಕ್ಕೆ ಬಾರದಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡಲು ನಿರ್ಧರಿಸಿದ್ದರು.

ಆದರೆ, ಇಂದು ಮುಷ್ಕರ ಮಾಡದಂತೆ ಹೈ ಕೋರ್ಟ್‌ ತಡೆ ನೀಡಿದ್ದು,  ಮೇ 21ಕ್ಕೆ ವಿಚಾರಣೆ ಮುಂದೂಡಿದೆ. ಅಲ್ಲದೆ ಈ ಬಗ್ಗೆ ಸರ್ಕಾರ ಮತ್ತು ಸಾರಿಗೆ ಸಂಘಟನೆಗಳು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದೆ. ಹೀಗಾಗಿ ನಾಳೆ ಸಾರಿಗೆ ಬಸ್‌ ಸಂಚಾರ ಎಂದಿನಂತೆ ಇರಲಿದೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ