NEWSನಮ್ಮರಾಜ್ಯ

ನೌಕರರ ವರ್ಗಾವಣೆ ವಿಚಾರದಲ್ಲಿ ಸಿಎಂಒ ನೇರ ಹಸ್ತಕ್ಷೇಪಕ್ಕೆ ಹೈಕೋರ್ಟ್ ತೀವ್ರ ಆಕ್ಷೇಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿಗಳ ಕಚೇರಿ ನೇರವಾಗಿ ಹಸ್ತಕ್ಷೇಪ ಮಾಡುವುದಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಿಂತಲೂ ಮಾಡಬೇಕಾದ ಉತ್ತಮ ಕೆಲಸಗಳು ಬಹಳಷ್ಟಿವೆ. ಇಂತಹ ಸಣ್ಣ ವಿಚಾರಗಳಿಗೆ ಅವರು ತಮ್ಮ ಸಮಯವನ್ನು ವಿನಿಯೋಗಿಸಬಾರದು ಎಂದು ನ್ಯಾಯಪೀಠ ಮಾರ್ಮಿಕವಾಗಿ ಹೇಳಿದೆ.

ಘಟನೆ ಏನು?: ಬೆಸ್ಕಾಂನ ವೈಟ್‌ಫೀಲ್ಡ್ ವಿಭಾಗದ ಸಹಾಯಕ ಇಂಜಿನಿಯರ್ (AE) ತಮ್ಮ ವರ್ಗಾವಣೆಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮೇಲ್ಮನವಿಯ (WA No. 2 of 2025) ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಹಾಗೂ ಟಿ.ಎಂ. ನದಾಫ್ ಅವರಿದ್ದ ವಿಭಾಗೀಯ ಪೀಠವು ಈ ಮಹತ್ವದ ಆದೇಶ ನೀಡಿದೆ.

ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಏಕಸದಸ್ಯ ಪೀಠವು ಈ ಹಿಂದೆ ನೀಡಿದ್ದ ಅಭಿಪ್ರಾಯಗಳನ್ನು ಎತ್ತಿಹಿಡಿದ ನ್ಯಾಯಪೀಠ, ಮುಖ್ಯಮಂತ್ರಿಗಳ ಕಚೇರಿಯಿಂದ ಬಿ ಹಾಗೂ ಸಿ ವರ್ಗದ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ನೂರಾರು ಶಿಫಾರಸು ಪತ್ರಗಳು ಹೊರಬರುತ್ತಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿತು.

ಹೈಕೋರ್ಟ್ ಆಕ್ಷೇಪದ ಸಾರಾಂಶ: ವರ್ಗಾವಣೆ ಮತ್ತು ಪೋಸ್ಟಿಂಗ್ ವಿಚಾರಗಳನ್ನು ಆಯಾ ಆಡಳಿತ ಇಲಾಖೆಗಳಿಗೆ ಮತ್ತು ಸಕ್ಷಮ ಪ್ರಾಧಿಕಾರಗಳಿಗೆ ಬಿಡಬೇಕು. ರಾಜ್ಯದ ಅತ್ಯುನ್ನತ ಅಧಿಕಾರಿಯಾದ ಮುಖ್ಯಮಂತ್ರಿಗಳು ಇಂತಹ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಮತ್ತು ತಮ್ಮ ಅಮೂಲ್ಯ ಸಮಯವನ್ನು ಇದಕ್ಕೆ ವ್ಯಯಿಸಬಾರದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಇನ್ನು ಮುಂದೆ ಮುಖ್ಯಮಂತ್ರಿಗಳ ಕಚೇರಿಯು ವರ್ಗಾವಣೆ ಕೋರಿ ಬರುವ ಯಾವುದೇ ನೇರ ಮನವಿಗಳನ್ನು ಸ್ವೀಕರಿಸಬಾರದು ಎಂದು ಸ್ಪಷ್ಟಪಡಿಸಿದೆ.

ಮುಖ್ಯ ಕಾರ್ಯದರ್ಶಿಗಳ ಸ್ಪಷ್ಟನೆ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಂದ (CS) ಸ್ಪಷ್ಟನೆ ಕೇಳಿತ್ತು. ಇದಕ್ಕೆ ಅಫಿಡವಿಟ್ ಸಲ್ಲಿಸಿರುವ ಮುಖ್ಯ ಕಾರ್ಯದರ್ಶಿಯವರು, ಮುಖ್ಯಮಂತ್ರಿಗಳ ಕಚೇರಿಯಿಂದ ಬರುವ ಟಿಪ್ಪಣಿಗಳು ಕೇವಲ ಶಿಫಾರಸುಗಳಷ್ಟೇ ಹೊರತು ಅವು ಅಂತಿಮ ವರ್ಗಾವಣೆ ಆದೇಶಗಳಲ್ಲ.

ಪ್ರತಿಯೊಂದು ವರ್ಗಾವಣೆಯನ್ನು ಆಯಾ ಇಲಾಖೆಗಳು ವರ್ಗಾವಣೆ ಮಾರ್ಗಸೂಚಿ ಮತ್ತು ಕೆಸಿಎಸ್ (KCS) ನಿಯಮಗಳ ಅಡಿಯಲ್ಲೇ ಪರಿಶೀಲಿಸಿ ಆದೇಶ ಹೊರಡಿಸುತ್ತವೆ ಎಂದು ಉತ್ತರಿಸಿದ್ದಾರೆ. ಅಲ್ಲದೆ ಇನ್ನು ಸಿಎಂ ಕಚೇರಿಯ ಸಿಬ್ಬಂದಿಗೂ ಈ ಬಗ್ಗೆ ಸೂಕ್ತ ಅರಿವು ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.

ಮಾರ್ಚ್ ವರೆಗೆ ಯಥಾಸ್ಥಿತಿ: ಪ್ರಸ್ತುತ ಪ್ರಕರಣದ ಅರ್ಜಿದಾರ ವರ್ಗಾವಣೆಗೆ ಸಂಬಂಧಿಸಿದಂತೆ ಮಾರ್ಚ್ ಅಂತ್ಯದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೋರ್ಟ್ ಸೂಚಿಸಿದೆ. ಏಪ್ರಿಲ್‌ನಿಂದ ಹೊಸ ವರ್ಗಾವಣೆ ಪ್ರಕ್ರಿಯೆ ಆರಂಭವಾಗುವುದರಿಂದ, ಅಲ್ಲಿಯವರೆಗೆ ಅವರನ್ನು ಹಾಲಿ ಇರುವ ಸ್ಥಳದಿಂದ ಬದಲಾಯಿಸಬಾರದು ಎಂದು ಪೀಠವು ನಿರ್ದೇಶಿಸಿದೆ.

ಇರದಲ್ಲಿ ಮತ್ತೊಂದು ವಿಶೇಷವೆಂದರೆ, ಹೈಕೋರ್ಟ್ ನೀಡಿದ ಈ ಆದೇಶದ ಪ್ರತಿಯನ್ನು ನೇರವಾಗಿ ಮುಖ್ಯಮಂತ್ರಿಗಳಿಗೆ ತಲುಪಿಸಲು ರಿಜಿಸ್ಟ್ರಾರ್ ಜನರಲ್ ಅವರಿಗೆ ಪೀಠವು ಸೂಚಿಸಿದೆ. ಇದರಿಂದ ಮುಖ್ಯಮಂತ್ರಿಗಳು ತಮ್ಮ ಕಚೇರಿಯಲ್ಲಿ ನಡೆಯುತ್ತಿರುವ ವರ್ಗಾವಣೆ ಶಿಫಾರಸುಗಳ ಬಗ್ಗೆ ಸ್ವತಃ ಗಮನಹರಿಸಿ, ಇಂತಹ ಪ್ರವೃತ್ತಿಗೆ ಕಡಿವಾಣ ಹಾಕಲು ಸಾಧ್ಯವಾಗಲಿದೆ ಎಂಬುದು ಕೋರ್ಟ್‌ನ ಆಶಯವಾಗಿದೆ.

ಈ ತೀರ್ಪು ರಾಜ್ಯ ರಾಜಕಾರಣದಲ್ಲಿ ಮತ್ತು ಸರ್ಕಾರಿ ನೌಕರರ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ಇದುವರೆಗೆ ವರ್ಗಾವಣೆಗಾಗಿ ರಾಜಕಾರಣಿಗಳ ಮತ್ತು ಸಿಎಂ ಕಚೇರಿಯ ಪ್ರಭಾವ ಬಳಸುತ್ತಿದ್ದವರಿಗೆ ಈ ಆದೇಶ ಒಂದು ಎಚ್ಚರಿಕೆಯ ಗಂಟೆಯಾಗಿದೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...