CrimeNEWSನಮ್ಮರಾಜ್ಯ

ಹಿಟ್‌ ಅಂಡ್ ರನ್‌: ಶ್ರೀರಂಗಪಟ್ಟಣಕ್ಕೆ ಹೊರಟಿದ್ದ ಮಹಿಳೆ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಹಿಟ್​ ಅಂಡ್​ ರನ್‌ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು 62 ವರ್ಷದ ಆಶಾರಾಣಿ ಎಂಬವರು ಮೃತಪಟ್ಟಿದ್ದಾರೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಆಶಾರಾಣಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನ ನಿವಾಸಿಯಾಗಿದ್ದು, ಅವರು ಶ್ರೀರಂಗಪಟ್ಟಣಕ್ಕೆ ಹೋಗಲು ಬೆಳಗಿನ‌ ಜಾವ 5:40ರ ಸುಮಾರಿಗೆ ಮನೆ ಬಿಟ್ಟು ಮಹಾಲಕ್ಷ್ಮೀ ಲೇಔಟ್ ಬಸ್ ನಿಲ್ದಾಣಕ್ಕೆ ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಯಾವುದೋ ವಾಹನ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ.

ನಸುಕಿನ ವೇಳೆ ಬೆಳಕು ಕಡಿಮೆ ಇದ್ದ ಕಾರಣ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬುದು ಪತ್ತೆಯಾಗಿಲ್ಲ. ಇದೀಗ ಪೊಲೀಸರು ಆ ಭಾಗದಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಹಿಟ್​ ಆ್ಯಂಡ್​ ರನ್‌ ಮಾಡಿ ಹೋದ ವಾಹನವನ್ನು ಪತ್ತೆ ಹಚ್ಚಲು ಯತ್ನಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ ಕೆಲವು ಸಮಯದಿಂದ ಹಿಟ್​ ಅಂಡ್​ ರನ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ರಾತ್ರಿಯ ಹೊತ್ತು ಮತ್ತು ಮುಂಜಾನೆ ವಾಹನಗಳು ಅತಿವೇಗವಾಗಿ ಮತ್ತು ವಿವೇಚನೆ ಇಲ್ಲದೆ ಸಾಗಿ ಜೀವವನ್ನು ಬಲಿ ಪಡೆಯುತ್ತಿವೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ