Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಬಿಬಿಎಂಪಿ ಚುನಾವಣೆ ನಡೆಸಿ, ಬೆಂಗಳೂರು ಉಳಿಸಿ: ಡಿ. 3ರಿಂದ ಎಎಪಿಯಿಂದ ಬೃಹತ್‌ ಸಹಿಸಂಗ್ರಹ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ಚುನಾವಣೆ ಮುಂದೂಡಲು ಕುತಂತ್ರ ಮಾರ್ಗ ಅನುಸರಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ, “ಬಿಬಿಎಂಪಿ ಚುನಾವಣೆ ನಡೆಸಿ, ಬೆಂಗಳೂರು ಉಳಿಸಿ” ಹೆಸರಿನಲ್ಲಿ ಆಮ್‌ ಆದ್ಮಿ ಪಾರ್ಟಿಯು ಬೆಂಗಳೂರಿನಾದ್ಯಂತ ಬೃಹತ್‌ ಸಹಿ ಸಂಗ್ರಹ ಹಮ್ಮಿಕೊಂಡಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಪಕ್ಷದ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, “ಡಿಸೆಂಬರ್ 3ರಿಂದ 5ರ ತನಕ ಬೆಂಗಳೂರಿನಾದ್ಯಂತ ಮೂರು ದಿನಗಳ ಬೃಹತ್‌ ಸಹಿಸಂಗ್ರಹ ಅಭಿಯಾನ ನಡೆಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ. ಸುಮಾರು ಐದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

ಇನ್ನು ಡಿಸೆಂಬರ್‌ 6ರ ಮಂಗಳವಾರ ಎಎಪಿ ಮುಖಂಡರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಬೆಂಗಳೂರಿನಾದ್ಯಂತ ಸಂಗ್ರಹಿಸಿದ ಸಹಿಗಳನ್ನು ರಾಜ್ಯಪಾಲರಿಗೆ ನೀಡಿ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ಶೀಘ್ರ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಆಗ್ರಹಿಸಲಾಗುವುದು ಎಂದು ವಿವರಿಸಿದರು.

2020ರಲ್ಲಿ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆಯನ್ನು ರಾಜ್ಯ ಬಿಜೆಪಿ ಸರ್ಕಾರ ಕುಂಟುನೆಪಗಳನ್ನು ಮುಂದಿಟ್ಟುಕೊಂಡು ಮುಂದೂಡುತ್ತಲೇ ಬಂದಿದೆ. ಇದರಿಂದ ಬೆಂಗಳೂರಿನ ಅಭಿವೃದ್ಧಿ ಕುಂಠಿತಗೊಳ್ಳುವುದರ ಜತೆಗೆ ನ್ಯಾಯಾಲಯದ ಅಮೂಲ್ಯ ಸಮಯ ವ್ಯರ್ಥವಾಗಿದೆ. ಚುನಾವಣೆ ನಡೆಯುವುದಕ್ಕೆ ಪದೇಪದೇ ಅಡ್ಡಗಾಲು ಹಾಕುವ ಮೂಲಕ ಬಿಜೆಪಿ ಸರ್ಕಾರವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದ್ರೋಹ ಎಸಗಿದೆ.

ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯಲ್ಲಿನ ದುರಾಡಳಿತದಿಂದಾಗಿ ಚುನಾವಣೆಯಲ್ಲಿ ಹೀನಾಯವಾಗಿ ಸೋಲುವುದು ಶತಸಿದ್ಧ ಎಂದು ಬಿಜೆಪಿಗೆ ಮನವರಿಕೆ ಆಗಿರುವುದರಿಂದ ಬಿಜೆಪಿಯು ಚುನಾವಣೆ ಮುಂದೂಡುವ ಕುತಂತ್ರ ಅನುಸರಿಸುತ್ತಿದೆ. ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಕೂಡ ಈ ವಿಷಯದಲ್ಲಿ ಮೌನ ವಹಿಸಿರುವುದನ್ನು ಗಮನಿಸಿದರೆ, ಅವು ಬಿಜೆಪಿಯೊಂದಿಗೆ ಶಾಮೀಲಾಗಿರುವುದು ಸ್ಪಷ್ಟವಾಗುತ್ತದೆ ಎಂದು ಮೋಹನ್‌ ದಾಸರಿ ಹೇಳಿದರು.

ಮೇಯರ್‌ ಹಾಗೂ ಕಾರ್ಪೊರೇಟರ್‌ಗಳು ಇಲ್ಲದ ಕಾರಣ ಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲ. 2022-23ನೇ ವಾರ್ಡ್‌ ಮಟ್ಟದ 2,543 ಕಾಮಗಾರಿಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ 867 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಆದರೆ ಎಂಟು ತಿಂಗಳಾದರೂ ಈ ಪೈಕಿ ಕೇವಲ 76 ಕಾಮಗಾರಿಗಳು ಆರಂಭಗೊಂಡಿವೆ.

ಅಧಿಕಾರಿಗಳು ನಾಮ್‌ ಕೇ ವಾಸ್ತೆಗೆ ವಾರ್ಡ್‌ ಮಟ್ಟದ ಸಭೆಗಳನ್ನು ನಡೆಸುತ್ತಿದ್ದರೂ ಪ್ರಶ್ನಿಸುವವರು ಇಲ್ಲವಾಗಿದೆ. ಕಸದ ಸಮಸ್ಯೆ, ರಸ್ತೆ ಗುಂಡಿಗಳು, ಅವ್ಯವಸ್ಥಿತ ಒಳಚರಂಡಿ, ಕೆಟ್ಟು ಹೋಗಿರುವ ವಿದ್ಯುತ್‌ ದೀಪ, ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳು ಬೆಂಗಳೂರಿನಲ್ಲಿ ತಾಂಡವವಾಡುತ್ತಿವೆ. ಇದರಿಂದಾಗಿ ನಾಗರಿಕರು ಬೆಂಗಳೂರನ್ನು ತೊರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮೋಹನ್‌ ದಾಸರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಸುರೇಶ್‌ ರಾಥೋಡ್‌ ಹಾಗೂ ಉಷಾ ಮೋಹನ್‌ ಭಾಗವಹಿಸಿದ್ದರು.

Leave a Reply

error: Content is protected !!
LATEST
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ - ನೊಂದ ನೌಕರರ ಮನವಿ KSRTC ಹಾಸನ ಹೊಸ ಬಸ್‌ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್‌ ಪಡೆಯಿರಿ  KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್‌ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್‌ ಚಾಲಕನ ಸ್ಥಿತಿ ಚಿಂತಾ...