CRIMENEWSನಮ್ಮಜಿಲ್ಲೆ

KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಈ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಿಜಯಪಥ ಸಮಗ್ರ ಸುದ್ದಿ

ಹೊಸಕೋಟೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಮತ್ತು ಲಾರಿ ನಡುವೆ ಭೀಕರ ಅಪಘಾತ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ಸಂಭವಿಸಿದೆ, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಎರಡು ಭಾರಿ ವಾಹನಗಳ ಡಿಕ್ಕಿಯ ರಭಸಕ್ಕೆ KSRTC ಬಸ್‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಆದರೂ ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಈ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ... ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ... ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಉತ್ತಮ ಸ್ಪಂದನೆ ಪಾರ್ಕ್‌ಗಳ ನಡಿಗೆದಾರರ ಸ್ನೇಹಿಯನ್ನಾಗಿ ರೂಪಿಸಿ: ನೂತನ ಆಯುಕ್ತ ಜಗದೀಶ್ ಕರೆ