CrimeNEWSನಮ್ಮರಾಜ್ಯ

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಬ್ಯಾಂಕ್‌ ಮ್ಯಾನೇಜರ್ ಸೇರಿ ಇಬ್ಬರು ಮೃತ, ಮತ್ತೊಬ್ಬರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಬ್ಯಾಂಕ್‌ ಮ್ಯಾನೇಜರ್ ಸೇರಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ಪಟ್ಟಣದ ಶಿಂಷಾ ನದಿ ಬಳಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ನಿವಾಸಿಗಳಾದ ಶಂಕರ್ ಹಾಗೂ ಮಹದೇವು ಎಂಬುವರು ಅಸುನೀಗಿದ್ದಾರೆ. ಮತ್ತೊಬ್ಬರಾದ ಕಿಶೋರ್ ಎಂಬುವರು ತೀವ್ರ ಗಾಯಗೊಂಡಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಈ ಮೂವರು ಬೆಂಗಳೂರಿನ ಐಸಿಐಸಿಐ ಬ್ಯಾಂಕ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕೆಲಸದ ನಿಮಿತ್ತ ಮೈಸೂರಿಗೆ ಬಂದಿದ್ದ ಇವರು ಬಳಿಕ ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಶಿಂಷಾ ನದಿ ಸೇತುವೆ ಮೇಲೆಯೇ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ನಂತರ ಕ್ಯಾಮೆರಾ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೈಸೂರು ಕಡೆಗೆ ಹೋಗುವ ರಸ್ತೆಗೆ ಹೋಗಿ ಕಾರು ಮಗುಚಿ ಬಿದ್ದಿದೆ.

ಡಿಕ್ಕಿಯ ರಭಸಕ್ಕೆ ಮ್ಯಾನೇಜರ್ ಶಂಕರ್ ಹಾಗೂ ಮಹದೇವು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಿಶೋರ್​​ಗೆ ಗಂಭೀರ ಗಾಯವಾಗಿದ್ದು, ಮಂಡ್ಯ ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಸ್ಥಳಕ್ಕೆ ಮದ್ದೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ  ಪ್ರಕರಣ ದಾಖಲಿಸಿಕೊಂಡು ಮುಂದಿನ  ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ