CRIMENEWSನಮ್ಮರಾಜ್ಯ

ಲಾರಿ-ಕಾರು ನಡುವೆ ಭೀಕರ ಅಪಘಾತ: ಓರ್ವ ಮಹಿಳೆ ಸೇರಿ ಮೂವರು ಸಾವು

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಬವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿ ಮೂವರು ಮೃತಪಟ್ಟಿರುವ ಘಟನೆ ಹೊಳಲ್ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ನಡೆದಿದೆ.

ಸುನಿತಾ (34), ಶ್ಯಾಮ್ (29) ಮತ್ತು ಶಿವು (35) ಮೃತಪಟ್ಟವರು. ಇಂದು ನಸುಕಿನ ಜಾವ 3ರ ವೇಳೆ ಕಣಿವೆ ಆಂಜನೇಯ ದೇಗುಲ ಬಳಿ ಈ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ.

ಇನ್ನು ಕಾರು ಆಂಧ್ರ ಪ್ರದೇಶ ಮೂಲದ್ದಾಗಿದ್ದು, ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಮುಂದಿನ ಕೆಳಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತದ ವಿಷಯ ತಿಳಿಯುತತಿದ್ದಂತೆ ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಹೊಳಲ್ಕೆರೆಯ ಶವಾಗಾರಕ್ಕೆ ಸಾಗಿಸಿದರು.

ಘಟನೆ ಸಂಬಂಧ ಹೊಳಲ್ಕೆರೆ ಠಾಣೆ ಪೊಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ ಜೂನ್, 21ರಂದು ವಿಶ್ವ ಯೋಗ ದಿನ ಆಚರಿಸೋಣ ಬನ್ನಿ ಡಿಸಿ ಡಾ.ಅನುರಾಧ ಕರೆ ಇ-ಖಾತಾ ತಿದ್ದುಪಡಿ ಜವಾಬ್ದಾರಿ ಉಪ ಆಯುಕ್ತರಿಗೆ ಕೊಡಿ: ಮಹೇಶ್ವರ್ ರಾವ್ ವಿದ್ಯುತ್ ಖಾಸಗೀಕರಣ ನಿಲ್ಲಿಸಿ: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಆಗ್ರಹ BMTC: ದೈಹಿಕವಾಗಿ ಫಿಟ್‌ ಇದ್ದರೂ ಲಘುಡ್ಯೂಟಿ ಮಾಡುತ್ತಿರುವ ನೌಕರರ ಸಂಘಟನೆಯ ಮುಖಂಡ- ಕಂಡು ಕಾಣದಂತೆ ಮೌನವಾಗಿರುವ ಅಧಿಕ...