LatestNEWSಕೃಷಿ

ವಿವಿಧ ಬೆಳೆಗಳ ಪ್ರೋತ್ಸಾಹಧನಕ್ಕೆ ರೈತರಿಂದ ಅರ್ಜಿ ಆಹ್ವಾನಿಸಿದ ತೋಟಗಾರಿಕೆ ಇಲಾಖೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಸಮಗ್ರ ತೋಟಗಾರಿಕೆ ಅಧಿವೃದ್ದಿ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ದೇವನಹಳ್ಳಿ ತಾಲೂಕಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ತೋಟಗಾರಿಕಾ ಇಲಾಖೆ ವತಿಯಿಂದ ರೈತರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ತಾಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎಂ.ಮಲ್ಲಿಕಾರ್ಜುನ್ ಬಾಬು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ (PMKSY-PDMC) ಹನಿ ನೀರಾವರಿ ಘಟಕಗಳನ್ನು ನಿರ್ಮಿಸಿಕೊಳ್ಳಬಹುದು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ (NHM) ಹಾಗೂ ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯಡಿ(CHD) ರೈತರು ದ್ರಾಕ್ಷಿ, ಮಾವು, ದಾಳಿಂಬೆ, ಡ್ರ್ಯಾಗನ್ ಪ್ರೊಟ್,ಬೆಣ್ಣೆ ಹಣ್ಣು,ಹೈಬ್ರಿಡ್ ತರಕಾರಿ ಹಾಗೂ ಹೂವಿನ ಬೆಳೆಗಳಾದ ಬಲ್ಬಸ್ ಪುಷ್ಪಗಳು, ಟ್ಯೂಬ್ರೋಸ್, ಧವನ, ಮಲ್ಲಿಗೆ ಹೂವುಗಳನ್ನು ಬೆಳೆಯಬಹುದು.

ಹಾಗೇ ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಪ್ಲಾಸ್ಟಿಕ್ ಟನೆಲ್ಸ್, ಸೆನ್ಸರ್ ಆಧಾರಿತ ಮಷಿನ್‌ಗಳು, ಪ್ರಾಥಮಿಕ ಸಂಸ್ಕರಣ ಘಟಕಗಳು, ಪಾಲಿ ಮನೆ, ಪಕ್ಷಿ ನಿರೋಧಕ ಬಲೆಗಳು, ಜೇನುಸಾಕಾಣಿಕೆ, ಘಟಕಗಳನ್ನು ನಿರ್ಮಿಸಿಕೊಳ್ಳಲು ಹಾಗೂ ಕೃಷಿಗೆ ಸಂಬಂಧಪಟ್ಟ ಯಂತ್ರೋಪಕರಣಗಳ ಖರೀದಿಗೆ ತೋಟಗಾರಿಕೆ ಇಲಾಖೆಯಿಂದ ಸಹಾಯಧನವನ್ನು ಪಡೆಯಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಜೂ.13ರಒಳಗೆ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಮಲ್ಲಿಕಾರ್ಜುನ್ ಬಾಬು ಬಿ.ಎಂ – 9480461234, ಹಾಗೂ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಾದ ಕುಂದಾಣ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಪೂರ್ಣಿಮ ಬಾಬು – 8867413260.

ವಿಜಯಪುರ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಆದರ್ಶ್ ಆರ್.ಕೆ. – 8722487173, ಕಸಬಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಹರೀಶ್ ಕುಮಾರ್ ಟಿ.ಜಿ – 7975888212, ಚನ್ನರಾಯಪಟ್ಟಣ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಕವಿತಾ ಎಸ್ ಪೂಜಾರಿ – 7259612750 ಗೆ ಕರೆಮಾಡಿ ಮಾಹಿತಿಯನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ