CrimeNEWSನಮ್ಮಜಿಲ್ಲೆ

ಶಾರ್ಟ್ ಸರ್ಕ್ಯೂಟ್‌ಗೆ ಹೊತ್ತಿ ಉರಿದ ಮನೆ : ದಂಪತಿ ಸಜೀವ ದಹನ

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಹೊತ್ತಿ ಉರಿದಿದ್ದು ದಂಪತಿ ಸಜೀವ ದಹನವಾಗಿರುವ ಧಾರುಣ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದಿದೆ.

ಸೈದಾಪುರ ಪಟ್ಟಣದ ಅಶೋಕಯ್ಯ ಕಾಳಬೆಳಗುಂದಿ ಎಂಬುವರ ಮನೆಯಲ್ಲಿ ಘಟನೆ ಸಂಭವಿಸಿದ್ದು, ರಾಘವೇಂದ್ರ (39) ಮತ್ತು ಪತ್ನಿ ಶಿಲ್ಪಾ (35) ಮೃತ ದಂಪತಿ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.

ಬಟ್ಟೆ ಅಂಗಡಿ ವ್ಯಾ ಪಾರಿಗಳಾಗಿದ್ದ ಇವರು ಮನೆಯ ಮೂರು ಮಹಡಿಗಳ ಪೈಕಿ ಎರಡರಲ್ಲಿ ಬಟ್ಟೆ ವ್ಯಾ ಪಾರ, ಒಂದರಲ್ಲಿ ವಾಸವಿದ್ದರು. ಎಂದಿನಂತೆ ವ್ಯವಹಾರಮುಗಿಸಿಕೊಂಡು ಮನೆಯಲ್ಲಿ ಮಲಗಿದ್ದಾಗ ಭಾನುವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಸೋಮವಾರ ಬೆಳಗಿನ ಜಾವ 5 ಗಂಟೆಗೆ ಸಾರ್ವಜನಿಕರು ಗಮನಿಸಿದ್ದಾರೆ. ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಬಟ್ಟೆಗಳು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿವೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಮೃತ ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಅಜ್ಜ ಹಾಗೂ ಅಜ್ಜಿಯೊಂದಿಗೆ ಮನೆಯ ಕೆಳಮಹಡಿಯಲ್ಲಿ ಮಲಗಿದ್ದರು. ಇದರಿಂದಾಗಿ ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಕಿ ಅವಘಡ ಸಂಬಂಧ ಸೈದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ