NEWSನಮ್ಮಜಿಲ್ಲೆನಮ್ಮರಾಜ್ಯ

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ ಬೆಲೆ 100 ರೂ. ಇಳಿಕೆಯೊಂದಿಗೆ ಈಗ ₹805 ರೂ.

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಗೃಹ ಬಳಕೆಯ ಗ್ಯಾಸ್‌ ಸಿಲಿಂಡರ್‌ ಬೆಲೆಯನ್ನು ನೂರು ರೂಪಾಯಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಾದ ಇಂದು ನಾರಿಯರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಉಜ್ವಲಾ ಯೋಜನೆಯಡಿ ಬಡ ಮಹಿಳೆಯರಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ಸರ್ಕಾರ 300 ರೂ. ಸಬ್ಸಿಡಿ ನೀಡುತ್ತಿದೆ. ಈ ಸಬ್ಸಿಡಿ ಯೋಜನೆಯನ್ನು ಏಪ್ರಿಲ್ 1ರಿಂದ ಆರಂಭಿಸಿ ಮುಂದಿನ ಒಂದು ವರ್ಷದವರೆಗೆ ವಿಸ್ತರಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದಾದ ಒಂದು ದಿನದ ಬಳಿಕ 100‌ ಕಡಿಮೆ ಮಾಡಿರುವುದಾಗಿ ಘೋಷಿಸಿದ್ದಾರೆ.

ತಮ್ಮ ‘ಎಕ್ಸ್‌’ ಖಾತೆಯಲ್ಲಿ ಈ ಬಗ್ಗೆ ಫೋಸ್ಟ್‌ ಹಾಕಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, “ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ವಿಶೇಷವಾಗಿ ಮಹಿಳೆಯರಿಗೆ ಪ್ರಯೋಜನವಾಗಲಿದೆ,” ಎಂದು ತಿಳಿಸಿದ್ದಾರೆ.

ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ ನಾವು ಕುಟುಂಬಗಳಿಗೆ ಆರ್ಥಿಕ ಬೆಂಬಲ ನೀಡುವ ಹಾಗೂ ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರ ಸಬಲೀಕರಣ ಮತ್ತು ಅವರ ಜೀವನವನ್ನು ಸುಲಭಗೊಳಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ಪ್ರಧಾನಿ ಬರೆದುಕೊಂಡಿದ್ದಾರೆ.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ಗ್ಯಾಸ್‌ ಸಬ್ಸಿಡಿಯನ್ನು ಜಾರಿಗೊಳಿಸಿತ್ತು. ಇದರ ಅಡಿಯಲ್ಲಿ ಸಾಮಾನ್ಯ ಗ್ರಾಹಕರಿಗೆ 200 ರೂ. ಹಾಗೂ ಉಜ್ವಲಾ ಗ್ರಾಹಕರಿಗೆ ಹೆಚ್ಚುವರಿ 300 ರೂ. ಸೇರಿ ಒಟ್ಟು 500 ರೂ. ಸಬ್ಸಿಡಿ ಜಾರಿಗೊಳಿಸಿತ್ತು. ಇದು ಮಾರ್ಚ್ 31ರವರೆಗೆ ಮುಂದುವರಿಯಲಿದೆ.

ಬೆಂಗಳೂರಿನಲ್ಲಿ ದರ ಎಷ್ಟಿದೆ?: ಸದ್ಯ ಬೆಂಗಳೂರಿನಲ್ಲಿ ಅಡುಗೆ ಅನಿಲ ಸಿಲಿಂಡರ್‌ಗೆ 905.50 ರೂ. ದರ ಇದೆ. ಇದು ಸಾಮಾನ್ಯ ಗ್ರಾಹಕರಿಗೆ ಅನ್ವಯವಾಗುವ ದರವಾಗಿದೆ. ಶುಕ್ರವಾರದ 100 ರೂ. ಕಡಿತದ ಘೋಷಣೆ ಬಳಿಕ ಇದೀಗ ದರ 805.50 ರೂ.ಗೆ ಇಳಿಕೆಯಾಗಲಿದೆ.

ಉಜ್ವಲಾ ಯೋಜನೆ ಫಲಾನುಭವಿಗಳಿಗೆ ಹೆಚ್ಚುವರಿ 300 ರೂ. ಸಬ್ಸಿಡಿ ಇದ್ದು, ಇವರಿಗೆ 505.50 ರೂ.ಗೆ ಎಲ್‌ಪಿಜಿ ಸಿಲಿಂಡರ್‌ ಲಭ್ಯವಾಗಲಿದೆ. 300 ರೂ. ಸಬ್ಸಿಡಿ ಮೊತ್ತ ನೇವಾಗಿ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ