ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಎರಡು ಕೋಟಿ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಮೊದಲೇ ನೋಟಿಸ್ ನೀಡಿದ್ದ ಅಧಿಕಾರಿಗಳು ಅವರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಇನ್ನು ಹಣಕಾಸು ವ್ಯವಹಾರ ಬಗ್ಗೆ ಸಿನಿಮಾ ನಿರ್ಮಾಣದಿಂದ ಬಂದ ಹಣವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೆರವು ನೀಡಲಾಗಿದೆ ಎಂದು ಲೋಕಾಯುಕ್ತ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಅಲ್ಲದೆ ಈ ಬಗ್ಗೆ ವಿವರಣೆ ನೀಡುವಂತೆ ಲೋಕಾಯುಕ್ತ ಪೊಲೀಸರು ರಾಧಿಕಾ ಅವರಿಗೆ ನೋಟಿಸ್ ನೀಡಿದ್ದರು. ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ರಾಧಿಕಾ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ಹಣ ನೀಡಿದ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸಲು ಸೂಚನೆ ನೀಡಲಾಗಿತ್ತು.
ಯಶ್ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದ ರಾಧಿಕಾ, ಈ ವೇಳೆ ಜಮೀರ್ ಅಹ್ಮದ್ ಖಾನ್ ಜತೆಗೆ ಹಣಕಾಸು ವ್ಯವಹಾರ ನಡೆಸಿರುವುದು ಪತ್ತೆ ಆಗಿತ್ತು. ಹೀಗಾಗಿ ಈ ಹಣಕಾಸು ವ್ಯವಹಾರದ ಬಗ್ಗೆ ತನಿಖಾಧಿಕಾರಿ ಬಳಿ ರಾಧಿಕಾ ಅವರು ನೀಡಿದ್ದ ಹೇಳಿಕೆ ದಾಖಲಿಸಲಾಗಿದೆ.
Related

 










