ನ್ಯೂಡೆಲ್ಲಿ: ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಪರಿಷ್ಕರಿಸಿದ್ದು, ಈ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.
19 ಕೆಜಿ ಸಿಲಿಂಡರ್ ಬೆಲೆ 83.50 ರೂ. ಇಳಿಕೆಯಾಗಿದ್ದು, ಈ ಮೂಲಕ ಜೂನ್ 1ರಿಂದ ವಾಣಿಜ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,773 ರೂ.ಗಳಾಗಿದೆ. ಆದರೆ, ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಕಳೆದ ಮೇ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 171.50 ರೂ. ಇಳಿಕೆ ಮಾಡಲಾಗಿತ್ತು. ಇದಕ್ಕೂ ಮುನ್ನ ಏಪ್ರಿಲ್ನಲ್ಲಿ 91.50 ರೂ. ಕಡಿತಗೊಳಿಸಲಾಗಿತ್ತು. ಆದರೆ, ಈ ಎರಡು ತಿಂಗಳುಗಳಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ಗಳ ದರ ಕಳೆದ ತಿಂಗಳಿನಷ್ಟೆ ಇದೆ.
ಜೂನ್ ಒಂದರಿಂದ ಅಂದರೆ ಇಂದಿನಿಂದ ವಾಣಿಜ್ಯ ಸಿಲಿಂಡರ್ ಬೆಲೆ ಕೋಲ್ಕತ್ತಾದಲ್ಲಿ 1,875.50 ರೂ., ಮುಂಬೈನಲ್ಲಿ 1,725 ರೂ., ಚೆನ್ನೈನಲ್ಲಿ 1,937 ರೂ.ಗಳಿದೆ.