NEWSನಮ್ಮಜಿಲ್ಲೆಸಂಸ್ಕೃತಿ

ಹುಂಡಿ ಹಣ ಎಣಿಕೆ: ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಹುಂಡಿಯಲ್ಲಿ ₹59.28 ಲಕ್ಷ ಸಂಗ್ರಹ

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ನಾಗಾರಾಧನೆಗೆ ಸುಪ್ರಸಿದ್ಧವಾಗಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಶನಿವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು.

ದೇವಾಲಯದ ಹುಂಡಿಯಲ್ಲಿ ಕಾಣಿಕೆರೂಪದಲ್ಲಿ ಬಂದಿರುವ ಹಣ ಹಣ ಎಣಿಕೆ ಮಾಡಿದ್ದು, 59,28,876 ರೂ. ಸಂಗ್ರಹವಾಗಿದೆ ಎಂದು ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಪದಾಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಕಾಣಿಕೆ ಹಣದ ಜತೆಗೆ 1.57 ಲಕ್ಷ ರೂ. ಮೌಲ್ಯದ 19.5 ಗ್ರಾಂ ಚಿನ್ನ, 63000 ರೂ. ಮೌಲ್ಯದ 1 ಕೆಜಿ 400 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಹುಂಡಿಯನ್ನು ನಿಯಮಾನುಸಾರ ತೆಗೆದು ಇಂದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಸಹ ಭಾಗವಹಿಸಿದ್ದರು.

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿ.ಎನ್.ರಂಗಪ್ಪ, ಕೆ.ಎಸ್.ರವಿ, ಲಕ್ಷ್ಮಣ ನಾಯಕ್, ಆರ್.ವಿ .ಮಹೇಶ್ ಕುಮಾರ್, ಹೇಮಲತಾ ರಮೇಶ್, ಪ್ರಧಾನ ಅರ್ಚಕ ಶ್ರೀನಿಧಿ, ದೇವಾಲಯದ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ಐಒಬಿ ಬ್ಯಾಂಕ್ ಸಿಬ್ಬಂದಿ ಇದ್ದರು.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...