NEWSಕೃಷಿನಮ್ಮರಾಜ್ಯ

ಇಂದಿನಿಂದ ಕಬ್ಬು ಬೆಳೆಗಾರ ರೈತರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ

38 ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಆಹೋ ರಾತ್ರಿ ಧರಣಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕಳೆದ 38 ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿ ನಿರತ ರೈತರು, ಮೂರು ದಿನದಿಂದ ಸರದಿ ಉಪವಾಸ ಸತ್ಯಾಗ್ರಹ ನಡೆಸಿದರೂ ರಾಜ್ಯ ಸರ್ಕಾರ ನಿರ್ಲಕ್ಷ ತೋರುತ್ತಿರುವ ಕಾರಣ ಇಂದಿನಿಂದ ನಿರಂತರ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗಿದೆ ಎಂದು ರೈತರು ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಬರಿ ಮಾತಿನ ಭರವಸೆಯಿಂದ ರೈತರ ಹೊಟ್ಟೆ ತುಂಬುವುದಿಲ್ಲ ನುಡಿದಂತೆ ನಡೆಯಬೇಕು, ನ್ಯಾಯ ಸಮ್ಮತ ಕಬ್ಬುದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಮೂರು ದಿನದಿಂದ ಐದು ಐದು ರೈತರು ಸರದಿ ಉಪವಾಸ ಸತ್ಯಾಗ್ರಹ ನಡೆಸಿದರು.

ಆದರೂ ಏನು ಪ್ರಯೋಜನ ಕಾಣದ ಹಿನ್ನೆಲೆಯಲ್ಲಿ ಇಂದಿನಿಂದ ನಿರಂತರ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ರೈತ ಮುಖಂಡರಾದ ಹಳಿಯಾಳದ ಕುಮಾರ್ ಬುಬಾಟಿ, ಶಂಕರ್ ಕಾಜಗಾರ್, ವೆಂಕಟೇಶ್ ಲಕ್ಷ್ಮಿಪುರ, ಮಹದೇವ್ ವಾಜಮಂಗಲ, ಮರಿಚನ್ನಯ್ಯ, ನಾಗರಾಜ್, ಪ್ರಕಾಶ್, ದಯಾನಂದ ಮರಾಠಿ, ಕುತ್ಗುದೀನ್ ನದಾಫ್ ಅಮರಣಾಂತ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ.

ಮಂಡ್ಯದಲ್ಲಿ ಧರಣಿ ನಿರತ ರೈತರ ಮೇಲಿನ ಪೋಲಿಸ್ ದೌರ್ಜನ್ಯ ಖಂಡಿಸಿ ಕಪ್ಪು ಬಟ್ಟೆ ತಲೆಗೆ ಕಟ್ಟಿ ಧರಣಿ ಪ್ರತಿಭಟನೆ: ಮಂಡ್ಯದಲ್ಲಿ ನಿರಂತರವಾಗಿ ಕಬ್ಬು ಬೆಲೆ, ಹಾಲಿನ ಬೆಲೆ ಮತ್ತಿತರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತಿದ್ದ ರೈತರನ್ನು ಬಂಧಿಸಿ, ಧರಣಿ ಮಾಡುತ್ತಿದ್ದ ಶಾಮಿಯಾನ ಟೆಂಟ್ ಗಳನ್ನು ಕಿತ್ತುಹಾಕಿ ಪೊಲೀಸ್ ದೌರ್ಜನ್ಯ ದಬ್ಬಾಳಿಕೆ ಎಸಗಿರುವುದು ಖಂಡನೀಯ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಸರ್ಕಾರ ಪೊಲೀಸ್ ದಬ್ಬಾಳಿಕೆಯ ಮೂಲಕ ರೈತ ಚಳವಳಿಯನ್ನು ಹತ್ತಿಕ್ಕಲು ಯತ್ನಿಸುವುದು ಖಂಡನಿಯ, ಚಳವಳಿ ನಡೆಸುತ್ತಿದ್ದ ವೇದಿಕೆಯನ್ನು ಕಿತ್ತು ಎಸೆದು ರೈತರನ್ನು ಬಂಧಿಸುವುದು ಸರ್ಕಾರದ ಹೇಡಿತನದ ವರ್ತನೆ, ಇಂಥ ಬೆದರಿಕೆಗೆ ರೈತರು ಬಗುವುದಿಲ್ಲ ಎಂಬುದನ್ನು ಸರ್ಕಾರ ಅರಿಯಲಿ.

ಆ ಘಟನೆಯನ್ನು ಖಂಡಿಸಿ‌ ಇಂದು ಉಪವಾಸ ನಿರತ ರೈತರು ತಲೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿ ಬೆಂಗಳೂರಿನ ದರಣಿ ಸ್ಥಳದಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಓಲೈಕೆ ಮಾಡಲು ಪೊಲೀಸ್ ಬಲ ಉಪಯೋಗಿಸಿಕೊಳ್ಳುವುದು ಮೂರ್ಖತನದ ಪರಮಾವಧಿ, ರೈತ ಮುಖಂಡರನ್ನು ಬಂಧಿಸುವುದು, ಚಳವಳಿಯನ್ನು ದಿಕ್ಕು ತಪ್ಪಿಸುವುದು ಪೊಲೀಸ್ ಬಲದ ಮೂಲಕ ಹತ್ತಿಕುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ರಾಜ್ಯದ ರೈತರು ಎಲ್ಲವನ್ನ ಗಮನಿಸುತ್ತಿದ್ದಾರೆ ಎಂದು ಎಚ್ಚರಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?