ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಘಟನೆಯನ್ನು ನಾನು ಕಣ್ಣಾರೆ ನೋಡಿದ್ದು, ಅಲ್ಲದೆ ನನಗೂ ಕೂಡ ಜನಗಳ ಮಧ್ಯೆ ಉರಿರುಗಟ್ಟಿತು ಎಂದು ರ‍್ಯಾಪರ್ ಚಂದನ್ ಶೆಟ್ಟಿ ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಯುವಕ ಯುವತಿಯರು ಮೃತಪಟ್ಟಿರುವುದ ಕುರಿತು ಮಾತನಾಡಿದರು.
ಗೇಟ್ ನಂಬರ್ 3ರಲ್ಲಿ ಹೋಗಲು ನನಗೆ ಪಾಸ್ ಸಿಕ್ಕಿತ್ತು. ಗೇಟ್ ನಂಬರ್ 3ಕ್ಕೆ ತಲುಪಲು ಆಗಲೇ ಇಲ್ಲ, ಅಷ್ಟು ಜನ ಸೇರಿದ್ದರು. ಗೇಟ್ ನಂಬರ್ 10ಕ್ಕೆ ಹೋದೆ, ಅಲ್ಲೂ ತುಂಬಾ ಜನರಿದ್ದರು. ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯಿತು ಎಂದು ನಿನ್ನೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ.
ಇನ್ನು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ 11 ಆರ್‌ಸಿಬಿ ಅಭಿಮಾನಿಗಳು ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ನೋಡಲು ಆಗುತ್ತಿಲ್ಲ.
Related

 










