NEWSನಮ್ಮರಾಜ್ಯಸಿನಿಪಥ

ಬದುಕಲಾಗುತ್ತಿಲ್ಲ ದಯಮಾಡಿ ನನಗೆ ವಿಷ ಕೊಡಿ: ನ್ಯಾಯಾಧೀಶರಲ್ಲಿ ನಟ ದರ್ಶನ್‌ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದಯಮಾಡಿ ನನಗೆ ವಿಷ ಕೊಡಿ ಎಂದು ನಟ ದರ್ಶನ್‌ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರಾದ ವೇಳೆ ಮನವಿ ಮಾಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ಇಂದು ನಗರದ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು.

ಈ ವಿಚಾರಣೆ ವೇಳೆ ನನಗೆ ದಯಮಾಡಿ ವಿಷ ನೀಡಿ. ಬಿಸಿಲು ನೋಡಿ ಬಹಳ ದಿನಗಳೆ ಕಳೆದುಹೋಗಿವೆ. ಇನ್ನು ಬಟ್ಟೆಗಳು ವಾಸನೆ ಬರುತ್ತಿವೆ. ಬಿಸಿಲು ಬೀಳದೆ ಫಂಗಸ್‌ನಿಂದಾಗಿ ಇಲ್ಲಿ ಬದುಕಲು ಆಗುತ್ತಿಲ್ಲ. ದಯಮಾಡಿ ನನಗೆ ವಿಷ ನೀಡುವಂತೆ ಆದೇಶಿಸಿ ಎಂದು ಮನವಿ ಮಾಡಿದರು.

ದರ್ಶನ್‌ ಅವರ ಮನವಿಗೆ ಜಡ್ಜ್‌ ಹಾಗೆಲ್ಲ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಆದರೂ ವಿಷ ಕೊಡಿ ಎಂದು ದರ್ಶನ್‌ ಮೂರು ಬಾರಿ ಬೇಡಿಕೊಂಡಿದ್ದು, ಅಲ್ಲದೆ ಫಂಗಸ್‌ ಆಗಿದೆ ಎಂದು ಹಲವು ಬಾರಿ ಅಳಲು ತೋಡಿಕೊಂಡರು.

ಇನ್ನು ದೈವ ಭಕ್ತರಾಗಿರುವ ದರ್ಶನ್‌ ಇಂದು ಹಣೆಗೆ ಕುಂಕುಮ ಹಚ್ಚಿಕೊಂಡು ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ವಿಚಾರಣೆಗೆ ಹಾಜರಾಗಿದ್ದು ವಿಶೇಷವಾಗಿತ್ತು.

ಪ್ರಾಸಿಕ್ಯೂಷನ್ ಮತ್ತು ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್‌ ಇಂದು (ಸೆ.9) ಮಧ್ಯಾಹ್ನ 3 ಗಂಟೆಗೆ ಆದೇಶ ನೀಡುವುದಾಗಿದೆ ಹೇಳಿದೆ.

Advertisement
ವಿಜಯಪಥ - vijayapatha.in
Megha
the authorMegha

Leave a Reply

error: Content is protected !!