ನ್ಯೂಡೆಲ್ಲಿ: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಾಡೆ ಮಾಡಲು ಸಭೆ ನಡೆಸುತ್ತಿದೆ.
2ನೇ ಪಟ್ಟಿ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಗೂ ಒಂದು ದಿನ ಮೊದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಸಿಎಂ ಹುದ್ದೆ ಬಗ್ಗೆ ಖಾಸಗಿ ಚಾನಲ್ ಸಂದರ್ಶನವೊಂದರಲ್ಲಿ ಸಿದ್ದರಾಮಯ್ಯ ಮಾತನಾಡಿದ್ದಾರೆ. ತಮ್ಮ ಮತ್ತು ಡಿ.ಕೆ.ಶಿವಕುಮಾರ್ ನಡುವೆ ರೇಸ್ ಇರುವ ಕುರಿತು ಮಾತನಾಡಿದ್ದರು ಎನ್ನಲಾಗಿತ್ತು.
ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ. ನಾನು ಆ ರೀತಿ ಹೇಳಿಕೆ ನೀಡಿಲ್ಲ ನನ್ನ ಹೇಳೀಕೆಯನ್ನ ಕೆಲವರು ತಿರುಚಿದ್ದಾರೆ. ಪ್ರಜಾಭುಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಸಿಎಂ ಆಯ್ಕೆ ಆಗಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ಅಂತ ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದರು.