ಬೆಂಗಳೂರು: ನಾಳೆ 11 ಗಂಟೆಗೆ ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆಗೆ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ರೈತರ ಪ್ರತಿಭಟನೆ ಬಗ್ಗೆ, ಎಫ್‌ಆರ್‌ಸಿ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಮುಗ್ದತೆಯನ್ನು ಬಳಸಿಕೊಂಡು ರೈತರಿಗೆ ತಪ್ಪು ಮಾಹಿತಿ ನೀಡಿ, ಕೇಂದ್ರ ಸರ್ಕಾರದ ಜವಾಬ್ದಾರಿಯಿದ್ದರೂ ಕೂಡ, ವಿಪಕ್ಷದವರು ರಾಜಕೀಯ ಮಾಡಲು ಹೊರಟಿದ್ದಾರೆ. ನಾನು ರೈತರಲ್ಲಿ ಮನವಿ ಮಾಡುತ್ತೇನೆ. ವಿಪಕ್ಷದವರ ಮಾತಿಗೆ ಬಲಿಯಾಗಬೇಡಿ ಎಂದರು.
ನಾಳೆ 1 ಗಂಟೆಗೆ ಬೆಂಗಳೂರಿನಲ್ಲೇ ಹಾವೇರಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ ಜಿಲ್ಲೆಗಳ ರೈತ ಮುಖಂಡ ಸಭೆಯನ್ನು ಕರೆಯಲಾಗಿದೆ. ಇದರ ಜತೆಗೆ ನಾಳೆಯೇ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆಯುತ್ತಿದ್ದೇನೆ. ನನಗೆ ಭೇಟಿ ನೀಡಲು ಅವಕಾಶ ಮಾಡಿಕೊಡಲು ಪತ್ರ ಬರೆಯುತ್ತಿದ್ದೇನೆ ಎಂದರು.
ಇನ್ನು ಮೋದಿ ಅವರು ತಕ್ಷಣ ಸಮಯ ನೀಡಿದರೇ ದೆಹಲಿಗೆ ತೆರಳಿ, ಅವರನ್ನು ಭೇಟಿ ಮಾಡಿ, ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುತ್ತದೆ. ರೈತರ ಪ್ರತಿಭಟನೆ ಬಗ್ಗೆ, ರೈತರ ಒತ್ತಾಯದ ಬಗ್ಗೆ ಚರ್ಚಿಸಲಾಗುವುದು ಎಂದರು.
3,500 ಪ್ರತಿ ಟನ್ ಕಬ್ಬಿಗೆ ನೀಡಬೇಕು ಎಂಬುದಾಗಿ ರೈತರು ಒತ್ತಾಯಿಸುತ್ತಿದ್ದಾರೆ. ನಾನು ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಾವು 3,200 ರೂಪಾಯಿ ಪ್ರತಿ ಟನ್ ಕಬ್ಬಿಗೆ ನೀಡಲು ನಿರ್ಧರಿಸಿದ್ದೇವೆ. 11.25 ರಿಕವರಿ ಬಂದರೇ 3,500 ರೂಪಾಯಿ, 10.25 ರಿಕವರಿ ಬಂದರೇ 3,100 ರೂಪಾಯಿ ಪ್ರತಿ ಟನ್ ಗೆ ನೀಡಲಾಗುತ್ತದೆ. ಇದನ್ನು ರೈತರಿಗೆ ಈಗಾಗಲೇ ಮುಟ್ಟಿಸಲಾಗಿದೆ ಎಂದರು.
ಇನ್ನು ನಿನ್ನೆ ರೈತರೊಂದಿಗೆ ಸಚಿವ ಎಚ್.ಕೆ ಪಾಟೀಲ್, ಎಂ.ಬಿ ಪಾಟೀಲ್ ಮಾತನಾಡಿದ್ದಾರೆ. ನಾವು ಪ್ರತಿಭಟನೆಯನ್ನು ಬಹಳ ಗಂಭೀರವಾಗಿ ಪರಿಗಣಿಸುವಂತ ಕೆಲಸ ಮಾಡಿದ್ದೆವು. ನಮ್ಮ ಸರ್ಕಾರ ಯಾವತ್ತೂ ರೈತರ ಪರವಾಗಿರುವಂತದ್ದಾಗಿದೆ ಎಂದರು.

ಸಕ್ಕರೆ ಕಾರ್ಖನೆಗಳು ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೇರಿದ್ದವಾಗಿವೆ. ಸತೀಶ್ ಜಾರಕಿಹೊಳಿ ಅವರು ಡಿಸಿ, ಎಸ್ಪಿಯನ್ನು ರೈತರೊಂದಿಗೆ ಮಾತನಾಡಲು ಕಳುಹಿಸಿದ್ದಾರೆ. ಅವರು ಹೋಗಿ ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಮಾತನಾಡಿದ್ದಾರೆ ಎಂದರು.
Related









