NEWSನಮ್ಮರಾಜ್ಯರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ: ಮಾಜಿ ಪ್ರಧಾನ ಎಚ್‌ಡಿಡಿ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಜಿಲ್ಲೆಯ ಬೇಲೂರು ವಿಧಾನಸಭೆ ಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ದೇವೇಗೌಡರು ನಿಲ್ಲಬೇಕು ಅಂತಾರೆ. ಆದ್ರೆ, ನಾನು ಈಗಾಗಲೆ ಹೇಳಿದ್ದು, ಎಲ್ಲೂ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ವೀಲ್​​ಚೇರ್​ನಲ್ಲಿ ಬಂದು ಚನ್ನಕೇಶವನ ದರ್ಶನ ಪಡೆದಿದ್ದೇನೆ. ನಿಮ್ಮ ಇಷ್ಡು ವರ್ಷದ ರಾಜಕೀಯ ಜೀವನದಲ್ಲಿ ಜಾತ್ಯತೀತ ತತ್ವದಡಿ ಕೆಲಸ ಮಾಡಿದ್ರಿ. ಆದರೆ ಕೊನೆಯ ಘಟ್ಟದಲ್ಲಿ ಯಾಕೆ ಮಾರ್ಪಾಡು ಅಂತಾ ಕೇಳ್ತಾರೆ. ಹೌದು ಮಾರ್ಪಾಡು ಮಾಡಿದ್ದೇನೆ. ನಾನು ಮೊಮ್ಮಗನ ಗೆಲ್ಲಿಸಿ ಅಂತಾ ಬಂದಿಲ್ಲ. ಈ ಜಿಲ್ಲೆಯ ಅಭಿವೃದ್ಧಿಗಾಗಿ ಬಂದಿದ್ದೇನೆ. ದೇವೇಗೌಡರು ಮತ್ತು ಅವರ ಮಕ್ಕಳು ಯಾರಿಗೆ ಅನ್ಯಾಯ ಮಾಡಿದ್ದೇವೆ ಹೇಳಿ ಎಂದು ತುಸು ಕೋಪದಲ್ಲೇ ಪ್ರಶ್ನಿಸಿದರು.

ನಮ್ಮ ಕುಟುಂಬ ಯಾರಿಗೂ ಅನ್ಯಾಯ ಮಾಡಿಲ್ಲ. ನಾವು ರೈತರ ಮಕ್ಕಳು. ನಿಮ್ಮನ್ನು ಬಿಟ್ಟು ಎಲ್ಲೂ ಹೋಗಲ್ಲ. ನಾನು ಇಲ್ಲಿಗೆ ಸಭೆ ನಿಲ್ಲಿಸುವುದಿಲ್ಲ. ಪ್ರತಿ ತಾಲೂಕಿಗೂ ಬರುತ್ತೇನೆ. ಎರಡೆರಡು ಬಾರಿ ನಿಮ್ಮ ರಕ್ಷಣೆಗೆ ನನ್ನ ಶರೀರ ತ್ಯಾಗ ಮಾಡಿದ್ದೇನೆ. ಯಾರೂ ಕೆಟ್ಟ ಅಪಪ್ರಚಾರಗಳಿಗೆ ಮಾರುಹೋಗದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಈ ದೇಶದಲ್ಲಿ ಕಾಂಗ್ರೆಸ್​ಗಾಗಿ ನನ್ನ ಪ್ರಾಣವನ್ನೇ ತೆತ್ತಿದ್ದೇನೆ. ನಾವು ಯಾರಿಗೆ ಅನ್ಯಾಯ ಮಾಡಿದ್ದೇವೆ ಸತ್ಯ ಹೇಳಿ. ನಾವು ಯಾರನ್ನು ಬಿಟ್ಟುಕೊಡುವುದಿಲ್ಲ. ನನ್ನ ಅಣ್ಣ ತಮ್ಮಂದಿರು ಮುಸ್ಲಿಂ ಬಾಂಧವರು. ನಿಮ್ಮ‌ ರಕ್ಷಣೆಗಾಗಿ ಈ ದೇಹ ಸವೆಸಿದ್ದೇನೆ. ಈ ದೇಶದ ನೂರು ಕೋಟಿ ಜನರಿಗೆ ನಾಯಕತ್ವ ಕೊಡುವ ವ್ಯಕ್ತಿತ್ವ ಇರೋದು ಮೋದಿಗೆ ಮಾತ್ರ. ಕಾಂಗ್ರೆಸ್ ಬಗ್ಗೆ ನಾನು ಬಹಳ ಮಾತನಾಡಬಲ್ಲೇ ಕೆಟ್ಟ ಅಪಪ್ರಚಾರಕ್ಕೆ ಮಾರು ಹೋಗಬೇಡಿ ಎಂದು ಮಾಜಿ ಪ್ರಧಾನಿ ಮನವಿ ಮಾಡಿದರು.

Leave a Reply

error: Content is protected !!
LATEST
KRS ಅಣೆಕಟ್ಟೆಗೆ 24ಗಂಟೆಯಲ್ಲೇ ಹರಿದು ಬಂತು 2 ಟಿಎಂಸಿ ನೀರು- ಅನ್ನದಾತರ ಮೊಗದಲ್ಲಿ ಮಂದಹಾಸ ಆಗಸ್ಟ್​ 1ರಿಂದಲೇ ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಆದೇಶ KKRTC ಬಸ್‌ ಡಿಕ್ಕಿ ಬೈಕ್‌ ಸವಾರ ಸಾವು ಮತ್ತೊಂದು ಘಟನೆಯಲ್ಲಿ ಡಿವೈಡರ್​​ಗೆ ಕಾರು ಡಿಕ್ಕಿ ಇಬ್ಬರು ಮೃತ, ಮೂವರಿಗೆ ಗಾಯ ಕಬಿನಿ ಜಲಾಶಯ ತುಂಬಲು ಒಂದು ಅಡಿ ಬಾಕಿ, KRSಗೆ ಹೆಚ್ಚಾಯಿತು ಒಳಹರಿವು ಮಹಿಳೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಬಳಿಕ ಸುಟ್ಟುಹಾಕಿದ ಪಾಪಿಗಳು KSRTC: 2024ರ ಜ.1ರಿಂದ 1.25 ಲಕ್ಷ ನೌಕರರಿಗೆ ಆಗಬೇಕಿರುವ ವೇತನ ಪರಿಷ್ಕರಣೆ ಬಗ್ಗೆ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಆಗಲ... ನಾಳೆ ರಾಜ್ಯ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರಿಗೆ ಸಿಎಂ ಕಬ್ಬು ಕೊಡುವರೋ ಇಲ್ಲ ಬೇವು ಕೊಡುವರೋ..!? KSRTC EFWA: ಉತ್ತಮ ವಿದ್ಯೆ ಪಡೆದು ಉನ್ನತ ಹುದ್ದೆಗೇರಿ - ಸಾರಿಗೆ ನೌಕರರ ಮಕ್ಕಳ ಸನ್ಮಾನಿಸಿದ ಸಚಿವ ರಾಮಲಿಂಗಾರೆಡ್ಡಿ ... ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಯಾವುದೂ ಇಲ್ಲ: ಪುರಸಭೆ ಮಾಜಿ ಸದಸ್ಯ ನೀಲಕಂಠ ಕೆ.ಆರ್.ಪೇಟೆ: ಲೋಕಾ ಅದಾಲತ್‌ನಲ್ಲಿ ನೂರಾರು ಪ್ರಕರಣಗಳು ಇತ್ಯರ್ಥ