NEWSನಮ್ಮಜಿಲ್ಲೆನಮ್ಮರಾಜ್ಯ

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ. ಸಮರ್ಪಕವಾಗಿ ಸಂಪನ್ಮೂಲ ಕ್ರೋಡಿಕರಣ ಮಾಡಿದರೆ, ಭ್ರಷ್ಟಾಚಾರ ಮತ್ತು ಕಮಿಷನ್‌ ದಂಧೆಯನ್ನು ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಇತರೆ ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಹಣ ಉಳಿಯುತ್ತದೆ ಎಂದು ಮೋಹನ್‌ ದಾಸರಿ ಅಭಿಪ್ರಾಯ ವ್ಯಕ್ತಪಡಿಸಿದರು.

ತೈಲ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಆಮ್‌ ಆದ್ಮಿ ಪಾರ್ಟಿ ಮುಖಂಡರು ಮಂಗಳವಾರ ನಗರದ ಸ್ವಾತಂತ್ರ್ಯ ಉದ್ಯಾನವನ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ದ್ವಿಚಕ್ರ ವಾಹನಗಳಿಗೆ ಹೂವಿನ ಹಾರಗಳನ್ನು ಹಾಕಿ ಅಣುಕು ಅಂತ್ಯಕ್ರಿಯೆ ನಡೆಸುವ ಮೂಲಕ ಗಮನ ಸೆಳೆದರು. ಸೈಕಲ್‌ಗಳನ್ನು ಏರಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು.

ಈ ಸಂದರ್ಭ ಮಾತನಾಡಿದ ಪಕ್ಷದ ಪ್ರಧಾನಕಾರ್ಯದರ್ಶಿ ಮೋಹನ್‌ ದಾಸರಿ, ಮೇ 2023ರಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ 1 ವರ್ಷದ ಅವಧಿಯೊಳಗೆ ಅಬಕಾರಿ ತೆರಿಗೆಯನ್ನು ಮೂರು ಬಾರಿ ಹೆಚ್ಚಿಸಿದ್ದಾರೆ. ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಗರಿಷ್ಠ ಶೇ. 25ರವರೆಗೆ ಏರಿಕೆ ಮಾಡಿದ್ದಾರೆ. ನಾನಾ ಹಂತದ ವಾಹನಗಳಿಗೆ ವಿಧಿಸುವ ತೆರಿಗೆಯನ್ನು ಹೆಚ್ಚಳ ಮಾಡಿದ್ದಾರೆ.

ಬೇರೆ ಯಾವೆಲ್ಲ ಮೂಲಗಳಿಂದ ತೆರಿಗೆ ಹೆಸರಲ್ಲಿ ಜನಸಾಮಾನ್ಯರನ್ನು ಹಿಂಡಬಹುದು ಎಂದು ಹುಡುಕುತ್ತಿದ್ದಾರೆ. ಇದರ್ಥ, ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕವಾಗಿ ಸುರಿಯುತ್ತಿರುವ 52 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಒದ್ದಾಡುತ್ತಿದ್ದಾರೆ ಎಂಬುದಾಗಿದೆ. ಅಧಿಕಾರಕ್ಕೆ ಬರಬೇಕು ಎಂಬ ಹಪಾಹಪಿಯಲ್ಲಿ ಅಧ್ಯಯನ ರಹಿತವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವುದೇ ಇದಕ್ಕೆಲ್ಲ ಮೂಲ ಕಾರಣ ಎಂದು ಆರೋಪಿಸಿದರು.

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನೇತೃತ್ವದಲ್ಲಿ ಅನುಷ್ಠಾನಕ್ಕೆ ತಂದಿರುವ ಉಚಿತ ಯೋಜನೆಗಳು ಭಾರಿ ಯಶಸ್ಸು ಕಂಡಿವೆ. ಕಾರಣ, ಸಮರ್ಪಕ ಸಂಪನ್ಮೂಲ ಕ್ರೋಡೀಕರಣ, ಭ್ರಷ್ಟಾಚಾರ ರಹಿತ ಆಡಳಿತ, ಅಧ್ಯಯಶೀಲ ಉಚಿತ ಯೋಜನೆಗಳ ಅನುಷ್ಠಾನಗಳಾಗಿವೆ.

ಆದರೆ ಈ ಯೋಜನೆಗಳನ್ನು ಕಾಪಿ ಮಾಡಿದ ಕಾಂಗ್ರೆಸ್‌ ಸರ್ಕಾರ ತರಾತುರಿಯಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುವ ಸಲುವಾಗಿ ಉಚಿತ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಭ್ರಷ್ಟಾಚಾರ, ಕಮಿಷನ್‌ ದಂಧೆ ಎಂದಿನಂತೆ ಎಗ್ಗಿಲ್ಲದೆ ಮುಂದುವರಿದಿದೆ. ಮೊದಲು ಭ್ರಷ್ಟಾಚಾರ, ಕಮಿಷನ್‌ಗಿರಿಯನ್ನು ನಿಲ್ಲಿಸಿ. ಗ್ಯಾರಂಟಿ ಯೋಜನೆಗಳು ಸುಗಮವಾಗಿ ಸಾಗುತ್ತವೆ ಎಂದು ಮೋಹನ್‌ ದಾಸರಿ ಸೂಚಿಸಿದರು.

ಈ ಸಂದರ್ಭ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್‌ ಸೆಹ್ವಾನಿ, ರಾಜ್ಯ ಖಜಾಂಚಿ ಪ್ರಕಾಶ್‌ ನೆಡುಂಗಡಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್‌, ರವಿ ಕುಮಾರ್‌, ಜಗದೀಶ್‌ ಚಂದ್ರ, ಜಗದೀಶ್‌ ಬಾಬು, ವೀಣಾ ಸರಾವು, ಅನಿಲ್‌ ನಾಚಪ್ಪ, ಮಹಾಲಕ್ಷ್ಮಿ, ಅಂಜನಾ ಗೌಡ, ಪುಟ್ಟಣ್ಣ, ಶಶಿಧರ್‌ ಆರಾಧ್ಯ, ರಾಮಾಂಜನೇಯ, ಲೋಕೇಶ್‌ ಕುಮಾರ್‌ ಸೇರಿದಂತೆ ಮತ್ತಿತರ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು