NEWSಕೃಷಿಮೈಸೂರು

ರೈತರ ನಿರ್ಲಕ್ಷ್ಯ ಮಾಡಿದರೆ ಬೀದಿಗಿಳಿದು ಹೋರಾಟ: ಕೇಂದ್ರ-ರಾಜ್ಯ. ಸರ್ಕಾರಗಳಿಗೆ ಕುರುಬೂರು ಶಾಂತಕುಮಾರ್ ಎಚ್ಚರಿಕೆ

ಕಬ್ಬು ಬೆಳೆಯಲ್ಲಿ ಖರ್ಚು ಕಡಿಮೆ ಮಾಡಿ ಹೆಚ್ಚು ಉತ್ಪಾದನೆ ಮಾಡುವ ಸಾಮರ್ಥ್ಯ ಇರುವ ಎಐ ತಂತ್ರಜ್ಞಾನ ( ಕೃತಕ ಬುದ್ಧಿಮತೆ) ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತರಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ, ಕೃಷಿ ಸಚಿವರಿಗೆ, ಸಕ್ಕರೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮುಂಗಾರು ಆರಂಭವಾಗಿದೆ ರೈತರಿಗೆ ಬೇಕಾದ ಬಿತ್ತನೆ ಬೀಜ, ಯೂರಿಯಾ, ಡಿಎಪಿ, ರಸಗೊಬ್ಬರ ಬೆಲೆ ಏರಿಕೆ ಸರಿಯಲ್ಲ. ಕೇಂದ್ರ-ರಾಜ್ಯ. ಸರ್ಕಾರಗಳು ಟೀಕೆಯಲ್ಲಿ ರೈತರನ್ನು ಮರೆಮಾಚಬೇಡಿ. ನಿರ್ಲಕ್ಷ್ಯ ಮಾಡಿದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ರೈತರತ್ನ ಕುರುಬೂರು ಶಾಂತಕುಮಾರ್ ಎಚ್ಚರಿಸಿದ್ದಾರೆ.

ಇಂದು ನಗರದ ಪಿಡಬ್ಲ್ಯುಡಿ ಅತಿಥಿಗೃಹ (ತಾಲೂಕು ಕಚೇರಿ ಹಿಂಬಾಗ) ದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ ಜಿಲ್ಲಾ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ತಮ್ಮ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿದರು.

ಕಬ್ಬು ಬೆಳೆಯಲ್ಲಿ ಖರ್ಚು ಕಡಿಮೆ ಮಾಡಿ ಹೆಚ್ಚು ಉತ್ಪಾದನೆ ಮಾಡುವ ಸಾಮರ್ಥ್ಯ ಇರುವ ಎಐ ತಂತ್ರಜ್ಞಾನ ( ಕೃತಕ ಬುದ್ಧಿಮತೆ) ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತರಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ, ಕೃಷಿ ಸಚಿವರಿಗೆ, ಸಕ್ಕರೆ ಸಚಿವರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ ಎಂದು ತಿಳಿಸಿದರು.

ಇನ್ನು ಪೆಟ್ರೋಲ್, ಡೀಸೆಲ್ ದರ ಪದೇಪದೇ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಇದು ರೈತರ ಕೃಷಿ ಚಟುವಟಿಕೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ರಸಗೊಬ್ಬರ, ಬಿತ್ತನೆ ಬೀಜ ಡೀಸೆಲ್ ದರ ಏರಿಕೆಯಿಂದ ಕೃಷಿ ಉತ್ಪಾದನೆ ವೆಚ್ಚ ಏರಿಕೆಯಾಗಲಿದ್ದು ಇದು ರೈತರನ್ನು ಇನಷ್ಟು ಸಂಕಷ್ಟಕ್ಕೆ ದೂಡಲಿದೆ ಎಂದರು.

ಮೈಸೂರು ನಗರದಲ್ಲಿ ವೈಟ್ ಟ್ಯಾಪಿಂಗ್ ರಸ್ತೆ ನಿರ್ಮಾಣ ಬೇಡ. ಪರಿಸರಕ್ಕೆ ಧಕ್ಕೆ, ಉಷ್ಣಾಂಶ ಏರಿಕೆಯಾಗುತ್ತದೆ. ವ್ಯವಸ್ಥಿತ ಡಾಂಬರು ರಸ್ತೆ ನಿರ್ಮಾಣವೇ ಒಳ್ಳೆಯದು. ಸಿಮೆಂಟ್ ಉತ್ಪಾದಕ ಕಂಪನಿಗಳ ಒತ್ತಡಕ್ಕೆ ಮಣಿಯುವುದು ಬೇಡ ಎಂದು ಹೇಳಿದರು.

ಇನ್ನು ಕೃಷಿ ಪಂಪ್ಸೆಟ್‌ಗಳಿಗೆ ಉಚಿತ ವಿದ್ಯುತ್ ನಿಲ್ಲಿಸಲು ಉನ್ನಾರ ಮಾಡಲಾಗುತ್ತಿದೆ. ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗಿಯವರಿಗೆ ವಹಿಸಲು ಟೆಂಡರ್ ಕರೆದಿರುವ ಪ್ರಕ್ರಿಯೆ ರೈತ ವಿರೋಧಿ ನೀತಿಯಾಗಿದ್ದು ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಪಿ.ಸೋಮಶೇಖರ್, ಕಿರಗಸೂರ್ ಶಂಕರ್, ವರಕೂಡ್ ನಾಗೇಶ್, ಪೈಲ್ವಾನ್ ವೆಂಕಟೇಶ್, ಸಿದ್ದೇಶ್, ವಿಜಯೇಂದ್ರ, ಮೂಕ್ಕಳ್ಳಿ ಮಹದೇವಸ್ವಾಮಿ, ನೀಲಕಂಠಪ್ಪ, ವರಕೋಡು ನಾಗೇಶ್, ಪಟೇಲ್ ಶಿವಮೂರ್ತಿ, ಸತೀಶ್, ಉಡಿಗಾಲ ರೇವಣ್ಣ, ಸುಂದರಪ್ಪ, ಕೆಂಡಗಣಪ್ಪ, ಪ್ರಸಾದ್ ನಾಯಕ, ಕಾಟೂರು ಮಹದೇವಸ್ವಾಮಿ, ಬಸವರಾಜ, ಪರಶಿವಮೂರ್ತಿ, ಪ್ರದೀಪ್, ಮಂಜುನಾಥ್, ಗೌರಿಶಂಕರ್, ಗುರುಸ್ವಾಮಿ, ಕುಮಾರ್, ನಂಜುಂಡಸ್ವಾಮಿ, ಕಾಟೂರು ನಾಗೇಶ್, ಸಿದ್ದರಾಮ, ನಾಗೇಂದ್ರ, ಉಮೇಶ್, ಮಹಾದೇವಪ್ಪ, ಕಮಲಮ್ಮ ಮುಂತಾದವರು ಇದ್ದರು.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ