Please assign a menu to the primary menu location under menu

CrimeNEWSನಮ್ಮಜಿಲ್ಲೆ

ತೋಟದ ಮನೆಯಲ್ಲಿ ಮಹಿಳೆ ಸಿಕ್ಕಿರುವುದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಸಾರಾ ಮಹೇಶ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡ್ನ್ಯಾಪ್ ಮಾಡಿದ್ದಾರೆ ಎನ್ನಲಾದ ಮಹಿಳೆಯ ತೋಟದ ಮನೆಯಲ್ಲಿ ಸಿಕ್ಕಿಲ್ಲ ಎಂದು ಶಾಸಕ ಸಾರಾ ಮಹೇಶ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಮಂಗಳವಾರ ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ. ದೇವೇಗೌಡ, ಶಾಸಕ ಸಾರಾ ಮಹೇಶ್ ಜಂಟಿಯಾಗಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರೇವಣ್ಣ ವಿರುದ್ಧ ಕೆ.ಆರ್. ನಗರದಲ್ಲಿ ಕೇಸ್ ದಾಖಲು ಆಗವುದಕ್ಕೆ ಮುಂಚೆಯೇ ಮಾಧ್ಯಮಗಳಿಗೆ ಹೇಗೆ ಗೊತ್ತಾಯ್ತು? ತೋಟದಲ್ಲಿ ಆ ಮಹಿಳೆ ಇದ್ದರು ಎಂಬುದರ ಒಂದು ವೀಡಿಯೋ ಯಾಕೆ ಬಂದಿಲ್ಲ?. ಅಷ್ಟಕ್ಕೂ ಸಂತ್ರಸ್ತ ಮಹಿಳೆ ತೋಟದಲ್ಲಿ ಸಿಕ್ಕಿಲ್ಲ. ಹುಣಸೂರಿನ ಕರೀಗೌಡ ರಸ್ತೆಯಲ್ಲಿರುವ ಸಂತ್ರಸ್ತೆಯ ಸಂಬಂಧಿ ಮನೆಯಿಂದ ಆಕೆಯನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ರಾಜಗೋಪಾಲ್ ತೋಟದಿಂದ ಸಂತ್ರಸ್ತ ಮಹಿಳೆಯನ್ನು ರಕ್ಷಿಸಿದ್ದು ಸಾಬೀತು ಮಾಡಿದ್ರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಈ ಕ್ಷಣವೇ ಜೆಡಿಎಸ್‌ಗೂ ರಾಜೀನಾಮೆ ಕೊಡುತ್ತೇನೆ ಎಂದು ಸವಾಲೆಸೆದರು.

ಪೆನ್ ಡ್ರೈವ್ ಹಂಚಿದವರನ್ನು ಯಾಕೆ ಇನ್ನೂ ಬಂಧಿಸಿಲ್ಲ. ಎಸ್‍ಐಟಿಯಲ್ಲಿ ಇರುವ ಕೆಲ ಅಧಿಕಾರಿಗಳು ಕಾಂಗ್ರೆಸ್‍ನ ಕೈ ಗೊಂಬೆ ರೀತಿ ವರ್ತಿಸುತ್ತಿದ್ದಾರೆ. ಜೆಡಿಎಸ್ ಮುಖಂಡರನ್ನು ಹತ್ತಿಕುವ ಕೆಲಸ ಈ ಪ್ರಕರಣದ ಮೂಲಕ ಆಗುತ್ತಿದೆ.

ಸಂತ್ರಸ್ತ ಮಹಿಳೆಯನ್ನು ಇನ್ನೂ ಯಾಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ?. ಆ ಸಂತ್ರಸ್ತ ಮಹಿಳೆಯನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದಿರಾ?. ಎಸ್‍ಐಟಿ ಅಧಿಕಾರಿಗಳನ್ನು ಇಟ್ಟುಕೊಂಡು ನಮ್ಮ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಜಿಟಿಡಿ ಮಾತನಾಡಿ, ಡ್ರೈವರ್ ಕಾರ್ತಿಕ್‌ನನ್ನು ಹೊರ ದೇಶಕ್ಕೆ ಕಳಿಸಿದ್ದು ಕಾಂಗ್ರೆಸಿಗರು. ಡಿ.ಕೆ.ಶಿವಕುಮಾರ್ ಅಪ್ಪಣೆ ಪಡೆದು ಕಾರ್ತಿಕ್ ಪೆನ್ ಡ್ರೈವ್ ಹಂಚಿದ್ದಾನೆ. ಯಾರನ್ನು ಬಂಧಿಸಬೇಕು, ಯಾರನ್ನು ಎ.1 ಮಾಡಬೇಕು ಯಾರನ್ನು ಎ. 2 ಮಾಡಬೇಕು ಎಂಬ ನಿರ್ದೇಶನ ಸಿಎಂ ಹಾಗೂ ಡಿಸಿಎಂ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹಾಲಿ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ಆಗಬೇಕು. ಡಿಸಿಎಂ ಈ ವಿಚಾರದಲ್ಲಿ ಸಂಪೂರ್ಣ ನೇತೃತ್ವ ವಹಿಸಿದ್ದಾರೆ. ಅವರು ಇದರಲ್ಲಿ ತಪ್ಪಿಸ್ಥರ ರೀತಿ ಕಾಣುತ್ತಿದ್ದಾರೆ. ಡಿಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೇ ಸರಕಾರ ಅವರನ್ನು ವಜಾ ಮಾಡಲಿ ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...