NEWSನಮ್ಮಜಿಲ್ಲೆನಮ್ಮರಾಜ್ಯ

ಸಾಮಾಜಿಕ ಪ್ರಭುತ್ವ ಸುಭದ್ರವಾಗಿದ್ದರೆ ರಾಜಕೀಯ ಪ್ರಜಾಪ್ರಭುತ್ವ ಗಟ್ಟಿ: ಸಿಎಂ ಅಭಿಮತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರು ಹಾಕಿಕೊಟ್ಟ “ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಿದೆ. ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳನ್ನು ಬದುಕಿನ ತತ್ವಗಳೆಂದು ಗುರುತಿಸುವ ಜೀವನ ವಿಧಾನವಾಗಿದೆ” ಎಂದು ಹೇಳಿದ್ದಾರೆ. ರಾಜಕೀಯ ಪ್ರಜಾಪ್ರಭುತ್ವ ಗಟ್ಟಿಯಾಗಿರಬೇಕಾದರೆ ಅದರ ತಳಹದಿಯಾದ ಸಾಮಾಜಿಕ ಪ್ರಜಾಪ್ರಭುತ್ವವು ಸುಭದ್ರವಾಗಿರಬೇಕು ಎಂಬ ಅಂಬೇಡ್ಕರ್ ಅವರ ಆಶಯದಂತೆ ನಮ್ಮ ಸರ್ಕಾರ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಮಾಣಿಕ್​ಷಾ ಪರೇಡ್​ ಮೈದಾನದಲ್ಲಿ ಆಯೋಜಿಸಿದ್ದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತ್ರಿವಣ ಧ್ವಜಾರೋಹಣ ಮಾಡಿದ ಬಳಿಕ ಮಾತನಾಡಿದರು. ಮುಂಗಾರು ವಿಳಂಬವಾಗಿ ಪ್ರಾರಂಭವಾದ್ದರಿಂದ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಬರದ ಛಾಯೆ ಇತ್ತು. ಜುಲೈ ತಿಂಗಳಲ್ಲಿ ಭಾರಿ ಮಳೆಯಾಗಿದ್ದರಿಂದ ಹಲವೆಡೆ ಪ್ರವಾಹ ಪರಿಸ್ಥಿತಿಯೂ ತಲೆದೋರಿತು. ಅತಿವೃಷ್ಟಿ, ಅನಾವೃಷ್ಟಿಗಳೆರಡನ್ನೂ ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ ಹಾಗೂ ಇದರಿಂದಾಗುವ ಹಾನಿಯನ್ನು ತಗ್ಗಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡುತ್ತಿದೆ.

ಗ್ಯಾರಂಟಿ ಯೋಜನೆಗಳ ಜೊತೆಗೆ ಕಳೆದ ಕೆಲವು ವರ್ಷಗಳಲ್ಲಿ ಸ್ಥಗಿತಗೊಂಡಿದ್ದ, ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದ ಕೃಷಿ ಭಾಗ್ಯ, ಅನುಗ್ರಹ ಯೋಜನೆ, ವಿದ್ಯಾಸಿರಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಥಗಿತಗೊಂಡಿರುವ ವಿದ್ಯಾರ್ಥಿವೇತನ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮರುಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಅವಕಾಶ ವಂಚಿತ ಸಮುದಾಯಗಳ ಹಿತರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ ಜಾತಿ, ಪಂಗಡದವರಿಗೆ ಹಂಚಿಕೆಯಾದ ಭೂಮಿಯ ಅಕ್ರಮ ಪರಭಾರೆ ವಿರುದ್ಧ ದೂರು ನೀಡಲು ಯಾವುದೇ ಕಾಲಮಿತಿ ಇಲ್ಲ ಎಂಬುದನ್ನು ನಿಚ್ಚಳಗೊಳಿಸಿದೆ.

ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ವಿಶೇಷ ಯೋಜನೆ ಕಾಯ್ದೆ 2013ರ ಸೆಕ್ಷನ್ 7(ಡಿ) ಯನ್ನು ರದ್ದುಪಡಿಸುವ ಮೂಲಕ ಡೀಮ್ಡ್ ವೆಚ್ಚದ ಹೆಸರಲ್ಲಿ ಈ ಸಮುದಾಯಗಳಿಗೆ ಮೀಸಲಿರುವ ಅನುದಾನ ಇತರೆ ಕಾರ್ಯಗಳಿಗೆ ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ.

ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಡಿ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ. ಇನ್ನು ಸ್ವಾವಲಂಬಿ ಸಾರಥಿʼ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಜನರಿಗೆ ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ ಸಾಲ-ಸಹಾಯಧನ ಸೌಲಭ್ಯ ನೀಡಲಾಗುವುದು.

ದಮನಿತ ವರ್ಗಗಳಿಗೆ ಚೈತನ್ಯ ತುಂಬುವ ಉದ್ದೇಶದಿಂದ ಪರಿಶಿಷ್ಟ ಜಾತಿ/ ಪಂಗಡಗಳ ಜನರಿಗೆ ನೀಡುತ್ತಿದ್ದ ಗುತ್ತಿಗೆ ಮೊತ್ತದ ಮಿತಿಯನ್ನು 50 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳಿಗೆ ಏರಿಸಲಾಗಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ-2ಎ ನಲ್ಲಿ ಬರುವ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂ.ವರೆಗಿನ ಸಿವಿಲ್ ಕಾಮಗಾರಿಗಳಲ್ಲಿ ಮೀಸಲಾತಿ ಸೌಲಭ್ಯ ಒದಗಿಸಲಾಗುವುದು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಶಾಲಾ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶಾಲೆ, ಕಾಲೇಜುಗಳಲ್ಲಿ ಶೌಚಾಲಯ ನಿರ್ಮಾಣವನ್ನು ಕೈಗೊಳ್ಳಲು 200 ಕೋಟಿ ರೂ. ಒದಗಿಸಲಾಗಿದೆ. ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡಲು ತೀರ್ಮಾನಿಸಿದ್ದೇವೆ.

ನಮ್ಮ 5 ವರ್ಷಗಳ ಅವಧಿಯಲ್ಲಿ ಅಗತ್ಯ ಇರುವವರಿಗೆ ಸೂರು ನೀಡಲು ಯೋಜಿಸಿದ್ದೇವೆ. ಸರ್ಕಾರಿ ಬಸ್ಸುಗಳ ಟ್ರ್ಯಾಕಿಂಗ್ ವ್ಯವಸ್ಥೆ, ಪ್ಯಾನಿಕ್ ಬಟನ್ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದ್ದೇವೆ. ಅಗತ್ಯ ಇರುವೆಡೆ ಹೊಸ ಬಸ್ಸುಗಳನ್ನು ಒದಗಿಸಲು ಸಿದ್ಧರಿದ್ದೇವೆ.

ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಯೋಜನೆಯನ್ನು ರೂಪಿಸಿದ್ದೇವೆ. ಹೈನುಗಾರಿಕೆಯನ್ನು ಉತ್ತೇಜಿಸಿ ಗ್ರಾಮೀಣ ಆರ್ಥಿಕತೆಗೆ ಚೈತನ್ಯ ನೀಡುವ ಉದ್ದೇಶದಿಂದ ಪ್ರತಿ ಲೀಟರ್ ಹಾಲಿಗೆ 3 ರೂಪಾಯಿಗಳಷ್ಟು ಮೊತ್ತವನ್ನು ಹೆಚ್ಚುವರಿಯಾಗಿ ರೈತರಿಗೆ ನೀಡಲಾಗುತ್ತಿದೆ. ಇದರ ಜೊತೆಗೆ ಕೃಷಿ ಕ್ಷೇತ್ರದ ಬಲವರ್ಧನೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ.

ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್ ಕೇಂದ್ರಗಳನ್ನು ಬಲ ಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಜೊತೆಗೆ ಎಂಆರ್‍ಐ/ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಜಿಲ್ಲಾ ಆಸ್ಪತ್ರೆಗಳಿಗೆ ವಿಸ್ತರಿಸುವ ಮೂಲಕ ಬಡ ರೋಗಿಗಳಿಗೆ ಉಚಿತ ಮತ್ತು ಉತ್ತಮ ಪರೀಕ್ಷೆ ಹಾಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಜೊತೆಗೆ ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಸುಗಮಗೊಳಿಸಿ ಜನರ ಕೈಗೆಟುಕುವಂತೆ ಕ್ರಿಯಾಯೋಜನೆಗಳನ್ನು ರೂಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ವಿವರಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು