ಬೆಂಗಳೂರು: 2020ರ ಜನವರಿ 1ರಿಂದ -2023ರ ಫೆ.28ರವರೆಗಿನ 38 ತಿಂಗಳ ಹಿಂಬಾಕಿ ಸೇರಿದಂತೆ ಒಟ್ಟಾರೆ 63 ತಿಂಗಳ ವೇತನ ಹಿಂಬಾಕಿಗೆ ಆಗ್ರಹಿಸುವ ಜತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ನಾಳೆ ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ.

ಒಂದು ವೇಳೆ ಇದಕ್ಕೆ ಸರ್ಕಾರ ಸ್ಪಂದಿಸದಿದ್ದರೆ ಅಂದಿನ ಅದರೆ ನಾಳೆ ಗುರುವಾರ ಸಂಜೆ ಬಳಿಕ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ ಹಾಗೂ ಎನ್‌ಡಬ್ಲ್ಯುಕೆಅರ್‌ಟಿಸಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.
ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ ಕೈಗೊಳ್ಳಲಿದ್ದಾರೆ.ನಗರದ ಫ್ರೀಡಂ ಪಾರಕ್‌ನಲ್ಲಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇದರಲ್ಲಿ 4 ನಿಗಮದ ನೌಕರರು ಭಾಗಿಯಾಗಲಿದ್ದಾರೆ.
ಹೀಗಾಗಿ ನಾಳೆ ಸಂಜೆ 4 ಗಂಟೆವರೆಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಲಾಗಿದ್ದು, ಬೇಡಿಕೆ ಸಂಬಂಧ ನಿರ್ಣಯ ಕೈಗೊಳ್ಳದಿದ್ದರೆ ಸಾರಿಗೆ ಬಂದ್ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಈ ಬಗ್ಗೆ ಸರ್ಕಾರದಿಂದ ಅಧಿಕೃತ ನಿರ್ಧಾರ ಬಾರದಿದ್ದರೆ ಬಂದ್ ಮಾಡುವುದಾಗಿ ಸಾರಿಗೆ ನೌಕರರು ಎಚ್ಚರಿಸಿದ್ದು,ಇದಕ್ಕೆ 2020ರ ಬಳಿಕ ನಿವೃತ್ತರಾಗಿರುವ ನೌಕರರು ಸೇರಿದಂತೆ ಸಾರಿಗೆಯ ಎಲ್ಲ ನಿವೃತ್ತ ನೌಕರರ ಹಾಲಿ ನೌಕರರು ಬೆಂಬಲ ಸೂಚಿಸಿದ್ದಾರೆ.
ಈ ನಡುವೆ ಗುರುವಾರ ಸಂಜೆ ಬಳಿಕ ಬಸ್ ಸಂಚಾರ ಸ್ಥಗಿತವಾಗಬಹುದು ಎಂದು ಬಹುತೇಕ ಖಚಿತವಾಗಿದೆ. ಆದರೆ, ಇದಕ್ಕೆ ಅಧಿಕಾರಿಗಳ ಸ್ಪಂದನೆ ಹೇಗಿರುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ. ಕಾರಣ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ಅಧಿಕಾರಿಗಳಿಗೂ ಕೂಡ ಒಟ್ಟಾರೆ 63 ತಿಂಗಳ ವೇತನ ಹಿಂಬಾಕಿ ಜತೆಗೆ 2024ರ ಜನವರಿ 1ರಿಂದ ವೇತನ ಹೆಚ್ಚಳವು ಆಗಬೇಕಿದೆ.
ಹೀಗಾಗಿ ಈ ಬಾರಿ ಪರೋಕ್ಷವಾಗಿ ಅಧಿಕಾರಿಗಳು ಕೂಡ ಈ ವೇತನ ಹೆಚ್ಚಳ ಸಂಬಂಧ ಹೋರಾಟವನ್ನು ಬೆಂಬಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಹೋರಾಟಕ್ಕೆ ಕರೆ ನೀಡಿರುವ ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ದೃಢವಾಗಿ ನಿಲ್ಲಬೇಕಿದೆ. ಇಲ್ಲ ತಕಡಿಯಲ್ಲಿ ಹಾಕಿದ ಕಪ್ಪೆಯಂತಾದರೆ ಮತ್ತೆ ಹೋರಾಟ ವಿಫಲಗೊಂಡು ನೌಕರರು ಸಮಸ್ಯೆಗೆ ಸಿಲುಕಲಿದ್ದಾರೆ ಎಂದು ಸ್ವತಃ ಕೆಲ ಅಧಿಕಾರಿಗಳೇ ಬೇಸರದಿಂದ ಹೋರಾಟದ ನೈಜತೆ ಬಗ್ಗೆ ಮಾತನಾಡಿದ್ದಾರೆ.
ಇನ್ನು ಈ ಎಲ್ಲದರ ನಡುವೆ ಕೆಎಸ್‌ಆರ್‌ಟಿಸಿ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದು, ಕೆಲಸಕ್ಕೆ ಹಾಜರಾಗದಿದ್ದರೆ ವೇತನವಿಲ್ಲ ಎಂದು ಹೇಳಿದೆ. ಅಲ್ಲದೆ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಅದನ್ನು ಬಿಟ್ಟು ಪ್ರತಿಭಟನೆಯಲ್ಲಿ ಭಾಗಿಯದರೆ ಸೇವಾ ನಿಯಮದ ಅನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಂಸ್ಥೆ ಎಂಡಿ ಅಕ್ರಮ್ ಪಾಷ ಎಚ್ಚರಿಕೆ ನೀಡಿದ್ದಾರೆ.
Related










