NEWSನಮ್ಮರಾಜ್ಯರಾಜಕೀಯ

ಕಮಿಷನ್‍ಗೆ ಬೇಡಿಕೆ ಇದೆ ಎಂದಾದರೆ ಲೋಕಾಯುಕ್ತಕ್ಕೆ ದೂರು ಕೊಡಲಿ: ಸಿಎಂ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳಲ್ಲಿ ಕಮಿಷನ್‍ಗೆ ಬೇಡಿಕೆ ಇದೆ ಎಂಬ ಬಗ್ಗೆ ಗುತ್ತಿಗೆದಾರರ ಸಂಘದಿಂದ ದೂರು ಏನೇ ಇದ್ದರೂ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಿ. ಅವರು ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳಲ್ಲಿ ಕಮಿಷನ್‍ಗೆ ಬೇಡಿಕೆ ಇದೆ ಎಂದು ಮಾಡಿರುವ ಆರೋಪದಲ್ಲಿ ಯಾವುದೇ ಸತ್ವ ಇಲ್ಲ. ಇನ್ನು ಅವರ ಬಳಿ ಈ ಸಂಬಂಧ ಯಾವುದೇ ದಾಖಲೆಗಳಿದ್ದರೆ ದೂರು ನೀಡಲಿ ಎಂದು ಕಿಡಿಕಾರಿದರು.

ಕೆಂಪಣ್ಣನವರ ಸಂಘ ನಮ್ಮ ಬಳಿ ಬಂದಿಲ್ಲ. ಕೆಲವು ಗುತ್ತಿಗೆದಾರರು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ ಅಷ್ಟೇ. ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಈ ಹಿಂದೆ ಆರೋಪ ಮಾಡಿದ ಎಲ್ಲದಕ್ಕೂ ಸರ್ಕಾರ ಕ್ರಮ ಜರುಗಿಸಿದೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ವಿವರಿಸಿದರು.

ಇನ್ನು ಭ್ರಷ್ಟಾಚಾರ ಆರೋಪದ ಪುರಾವೆಗಳ ಜತೆಗೆ ದೂರು ಸಲ್ಲಿಸಲಿ. ಪ್ರಧಾನಿಯವರಿಗೆ ಪತ್ರ ಬರೆಯುವ ಅವಕಾಶ ಎಲ್ಲರಿಗೂ ಇದೆ. ಏನಾದರೂ ತೊಂದರೆ ಇದ್ದರೆ ದೂರು ಕೊಡುವ ವ್ಯವಸ್ಥೆಯೂ ಇದೆ. ದೂರು ಕೊಡಲಿ. ತನಿಖೆ ನಡೆಯಲಿದೆ ಎಂದು ಹೇಳಿದರು.

ವ್ಯವಸ್ಥೆಗೆ ಹಿಡಿದ ಕನ್ನಡಿ – ಕೆಂಪಣ್ಣ: ರಾಜ್ಯದ ಮುಖ್ಯಮಂತ್ರಿಯಾಗಿ ತಮ್ಮ ಮತ್ತು ತಮ್ಮ ಸಂಪುಟ ಅಚಿವರ ವಿರುದ್ಧ ದೂರು ಕೇಳಿ ಬರುತ್ತಿದ್ದರು. ಅದಕ್ಕೆ ಮೂಕವಾಗಿ ಸಿಎಂ ಇರುವುದು ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ ಎಂದು ಕೆಂಪಣ್ಣ ಇತ್ತ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು