Please assign a menu to the primary menu location under menu

NEWSಕೃಷಿನಮ್ಮರಾಜ್ಯ

ಬೀಜ, ಗೊಬ್ಬರ ವಿತರಣೆಯಲ್ಲಿ ಅನ್ಯಾಯ ಆದರೆ ಕಚೇರಿಗೆ ಬೀಗ: ರೈತರ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ಸೇರಿದಂತೆ ತಾಲೂಕಿನೆಲ್ಲೆಡೆ ಗೊಬ್ಬರ ಹಾಗೂ ಬೀಜ ವಿತರಣೆಯಲ್ಲಿ ಅನ್ಯಾಯವಾದರೆ ಇಲಾಖಾಧಿಕಾರಿಯೇ ನೇರ ಹೊಣೆ. ನಿರ್ಲಕ್ಷ್ಯ ತೋರಿದರೆ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಲ‍ಾಗುವುದೆಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜರುಗಿದ, ತಾಲೂಕಿನ ರೈತ ಮುಖಂಡರು ಹಾಗೂ ಕೃಷಿ ಪರಿಕರ ಮಾರಾಟಗಾರರ ಸಭೆಯಲ್ಲಿ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿ ಕಿಸಾನ್ ಸಭಾ ರಾಜ್ಯ ಉಪಾಧ್ಯಕ್ಷ ಎಚ್.ವೀರಣ್ಣ, ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳ ಅಂಗಡಿಗಳಲ್ಲಿ ರಸ ಗೊಬ್ಬರ ಬೀಜಗಳನ್ನು ಅತ್ಯಧಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ರೈತರು ಖರೀದಿ ಮಾಡಿದ ಬೀಜ ಹಾಗೂ ರಸ ಗೊಬ್ಬರಕ್ಕೆ ಅನೇಕ ಅಂಗಡಿಗಳಲ್ಲಿ ರಶೀದಿ ನೀಡುತ್ತಿಲ್ಲ. ಈ ಬಗ್ಗೆ ಪ್ರತಿ ಸಭೆಗಳಲ್ಲಿ ಚರ್ಚಿಸುತ್ತಿದೆಯಾದರೂ, ಯಾವುದೇ ಕ್ರಮ ಜರುಗಿಸುವ ಧೈರ್ಯವನ್ನು ಅಧಿಕಾರಿಗಳು ತೋರಿಲ್ಲ ಎಂದು ಆರೋಪಿಸಿದರು.

ಸರ್ಕಾರದ ನಿಯಮಗಳನ್ನು ಯಾವ ಅಂಗಡಿವರು ಪಾಲನೆ ಮಾಡುತ್ತಿಲ್ಲ, ಪಟ್ಟಣದ ಅಂಗಡಿಗಳಲ್ಲಿ ರಸ ಗೊಬ್ಬರ ಇಲ್ಲ ಎಂದು ಹೇಳುತ್ತಾರೆ. ಆದರೆ, ಗ್ರಾಮಗಳಲ್ಲಿ ಹೆಚ್ಚಿನ ಬೆಲೆಗೆ ಬೀಜ ಗೊಬ್ಬರ ಮಾರಾಟ ಮಾಡಲಾಗುತ್ತಿದೆ, ಅವರಿಗೆ ಅದು ಎಲ್ಲಿಂದ ಬರುತ್ತದೆ ಈ ಬಗ್ಗೆ ಅಧಿಕಾರಿಗಳು ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವೀರಣ್ಣ ಪ್ರಶ್ನಿಸಿದರು.

ರೈತ ಮುಖಂಡರಾದ ಕೆ.ಕೆ.ಹಟ್ಟಿ ಮಹೇಶ ಹಾಗೂ ಕಕುಪ್ಪಿ ಬದವರಾಜ ಮತ್ತು ಭಾಷಾ ಸಾಬ್ ಮಾತನಾಡಿ, ಮುಂಗಾರು ಪೂರ್ವದಲ್ಲಿಯೇ ಸಭೆ ನಡೆಸಬೇಕಿದೆ. ಈ ಹಿಂದೆ ಅನೇಕ ಬಾರಿ ಇದರ ಬಗ್ಗೆ, ಅಧಿಕಾರಿಗಳೊಂದಿಗೆ ಚರ್ಚಿಸಲ‍ಾಗಿದೆ. ಆದರೂ ಮತ್ತೆ ಅದೇ ಲೋಪ ಎಸಗಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೃಷಿ ಅಧಿಕಾರಿ ಎಂ.ಟಿ.ಸುನೀಲ್ ಮಾತನಾಡಿ, ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ ಬೀಜ, ಗೊಬ್ಬರವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಅಂಗಡಿಯವರು ರೈತರಿಗೆ ತಾವು ಮಾರಾಟ ಮಾಡಿದ ಬೀಜ ಗೊಬ್ಬರಗಳಿಗೆ, ರಸೀದಿಯನ್ನು ಕಡ್ಡಾಯವಾಗಿ ನೀಡಬೇಕು. ಅಂಗಡಿಗಳಲ್ಲಿ ನಿಗದಿತ ದರಕ್ಕೆ ಮಾತ್ರ ಮಾರಾಟ ಮಾಡಬೇಕು. ನಿಯಮ ಮೀರಿ ಮಾರಾಟ ಮಾಡಿದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನು ರಸ ಗೊಬ್ಬರ ಹಾಗೂ ಬೀಜ ಮಾರಾಟ ಮಾಡುವಾಗ ಸರ್ಕಾರದ ನಿಯಮಗಳನ್ನು ಪಾಲಿಸಲೇಬೇಕು. ನಿಯಮ ಉಲ್ಲಂಘಿಸಿರುವ ಬಗ್ಗೆ ಸೂಕ್ತ ದಾಖಲೆ ಹಾಗೂ ಸಾಕ್ಷ್ಯಾಧಾರಗಳ ಸಮೇತ ದೂರು ಬಂದಲ್ಲಿ. ಅಂತಹ ಮಾಾರಟಗಾರರ ವಿರುದ್ಧ, ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು.

ಜಾರಿ ದಳ ಸಹಾಯಕ ನಿರ್ದೇಶಕ ಕುಮಾರ ಸ್ವಾಮಿ, ಸಹಾಯಕ ಕೃಷಿ ಅಧಿಕಾರಿ ಗುರುಬಸವರಾಜ, ತಾಂತ್ರಿಕ ವ್ಯವಸ್ಥಾಪ ಶ್ರವಣ್ ಕುಮಾರ್, ಕೃಷಿಕ ಸಮಾಜ ಅಧ್ಯಕ್ಷ ಎಂ.ಜಿ. ಸಿದ್ದನಗೌಡ, ಉಪಾಧ್ಯಕ್ಷ ನಂದಿ ಜಂಬಣ್ಣ, ರೈತ ಸಂಘದ ಮುಖಂಡರಾದ ಹಾಲಸ್ವಾಮಿ, ಪರುಶುರಾಮ್ ನಾಯ್ಕ್, ದುರುಗಪ್ಪ, ಶೇಷಪ್ಪ ಕಾಟೇರ್, ನಾಗರಾಜ, ನಾರಾಯಣ ನಾಯ್ಕ್, ಪಾಂಡುರಂಗ ನಾಯ್ಕ್ ಹಾಗೂ ಕೃಷಿ ಪರಿಕರ ಮಾರಾಟಗಾರರು ಸಭೆಯಲ್ಲಿ ಇದ್ದರು.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ