NEWSಕ್ರೀಡೆನಮ್ಮರಾಜ್ಯ

ಈ ನಾಲ್ಕು ಬದಲಾವಣೆಗಳಾದರೆ ಆರ್‌ಸಿಬಿ ಗೆಲುವು – ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಭವಿಷ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ 2ನೇ ಪಂದ್ಯದಲ್ಲಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಇದರ ಬೆನ್ನಲ್ಲೇ ತವರಿನಲ್ಲಿ ಕೆಕೆಆರ್ ತಂಡದ ವಿರುದ್ಧ ಹೀನಾಯ ಸೋಲನುಭವಿಸಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಇನ್ನು ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲಿ ಬದಲಾವಣೆ ಮಾಡಬೇಕಿರುವುದು ಅನಿವಾರ್ಯ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್. ಹೌದು! ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಆರ್​ಸಿಬಿ ಇದುವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದನಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ ತನ್ನ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿದೆ.

ಇನ್ನು ಮೂರನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಗ್ಗರಿಸಿದೆ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಸಜ್ಜಾಗುತ್ತಿದೆ. ಹೀಗಾಗಿ ಈ ಬಗ್ಗೆ ಮಾತನಾಡಿರುವ ಕೃಷ್ಣಮಾಚಾರಿ ಶ್ರೀಕಾಂತ್, ಆರ್​ಸಿಬಿ ತಂಡವು ಮೊದಲ ಮಾಡಬೇಕಿರುವುದು ಆರಂಭಿಕ ಜೋಡಿಯ ಬದಲಾವಣೆ. ಇಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಫಾಫ್ ಡುಪ್ಲೆಸಿಸ್ ಮೂರು ಪಂದ್ಯಗಳಲ್ಲೂ ವಿಫಲರಾಗಿದ್ದಾರೆ. ಹೀಗಾಗಿ ಡುಪ್ಲೆಸಿಸ್ ಅವರನ್ನು ಆರಂಭಿಕನ ಸ್ಥಾನದಿಂದ ಕೈ ಬಿಡಬೇಕು.

ಅಲ್ಲದೆ ಆರಂಭಿಕನಾಗಿ ಸ್ಪೋಟಕ ದಾಂಡಿಗ ವಿಲ್ ಜಾಕ್ಸ್ ಅವರನ್ನು ಆರ್​ಸಿಬಿ ಕಣಕ್ಕಿಳಿಸಬೇಕು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಿರುಸಿನ ಆರಂಭವನ್ನು ಪಡೆಯಬಹುದು. ಇನ್ನು ಡುಪ್ಲೆಸಿಸ್ 3ನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ಹಾಗೆಯೇ ತಂಡದ ಪ್ಲೇಯಿಂಗ್ ಇಲೆವೆನ್​ನಿಂದ ಅಲ್ಝಾರಿ ಜೋಸೆಫ್ ಹಾಗೂ ರಜತ್ ಪಾಟಿದಾರ್ ಅವರನ್ನು ಕೈ ಬಿಡಬೇಕು. ಈ ಇಬ್ಬರೂ ಮೂರು ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಮತ್ತಷ್ಟು ಅವಕಾಶ ನೀಡುತ್ತಾ ಕೂರುವುದು ಸರಿಯಲ್ಲ. ಹಾಗಾಗಿ ಮುಂದಿನ ಪಂದ್ಯದಿಂದ ಇಬ್ಬರಿಗೂ ಗೇಟ್ ಪಾಸ್ ನೀಡಬೇಕೆಂದು ಹೇಳಿದ್ದಾರೆ.

ಇಲ್ಲಿ ಅಲ್ಝಾರಿ ಜೋಸೆಫ್ ಅವರನ್ನು ಕೈ ಬಿಡುವುದರಿಂದ ವಿಲ್ ಜಾಕ್ಸ್​ಗೆ ಚಾನ್ಸ್ ನೀಡಬಹುದು. ಹಾಗೆಯೇ ರಜತ್ ಪಾಟಿದಾರ್ ಸ್ಥಾನದಲ್ಲಿ ಮತ್ತೋರ್ವ ವೇಗಿ ಆಕಾಶ್ ದೀಪ್​ಗೆ ಅವಕಾಶ ನೀಡಿ. ಆತ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯಲು ಅರ್ಹ ಆಟಗಾರ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ನಾಲ್ಕು ಬದಲಾವಣೆಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿದರೆ ಮುಂದಿನ ಪಂದ್ಯದಲ್ಲಿ ಗೆಲ್ಲಲಿದೆ ಎಂದು ಕೃಷ್ಣಮಾಚಾರಿ ಶ್ರೀಕಾಂತ್ ಭವಿಷ್ಯ ನುಡಿದಿದ್ದಾರೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ